ಉಡುಪಿ: 14ನೇ ವರ್ಷದ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ
ಉಡುಪಿ: ಜಾನಪದ ಸಂಸ್ಕೃತಿಯು ಹಲವಾರು ಪ್ರತಿಭಟನೆ, ಪ್ರತಿರೋಧದ ಕಥೆಗಳನ್ನುಒಳಗೊಂಡಿದೆ. ಸಿದ್ಧಾಂತ ಆಧಾರಿಸಿ ಸಂಶೋಧನೆ ಮಾಡಬೇಕು. ಇದರಿಂದ ಸಂಶೋಧನೆಯಲ್ಲಿ ಹೊಸ ದಾರಿ ಲಭಿಸಿ, ಬಹಳಷ್ಟು ಪಕ್ವಗೊಳ್ಳುವಂತೆ ಮಾಡುತ್ತದೆ ಎಂದು ಮಂಗಳೂರು ವಿ.ವಿ. ವಿಶ್ರಾಂತ ಪ್ರಾಧ್ಯಾಪಕ, ಜಾನಪದ ಸಂಶೋಧಕ ಡಾ| ಅಭಯ ಕುಮಾರ್ ಹೇಳಿದರು.
ಯುವವಾಹಿನಿ ಉಡುಪಿ ಘಟಕದ ವತಿಯಿಂದ ರವಿವಾರ ಚಿಟ್ಪಾಡಿ ಲಕ್ಷ್ಮೀ ಟ್ರೇಡ್ ಸೆಂಟರ್ ನಲ್ಲಿ ನಡೆದ 14ನೇ ವರ್ಷದ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಾನಪದ ವಿದ್ವಾಂಸ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.
ಪ್ರದರ್ಶನ ಸಿದ್ಧಾಂತ ಎಂದರೆ ಕೇವಲ ಕಲೆಯಲ್ಲ ಅದು ಸಂಸ್ಕೃತಿಯ ಭಾಗ. ಶಿಕ್ಷಣ ಮತ್ತು ಸಿಕ್ಕ ಅವಕಾಶಗಳನ್ನು ನಾವು ಬಳಸಿಕೊಳ್ಳುವುದರಿಂದ ವ್ಯಕ್ತಿತ್ವ ವೃದ್ಧಿಯಾಗುತ್ತದೆ ಎಂದರು.
ಜಾನಪದ ಕಲಾವಿದ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಚಿತ್ರಕಾಲ ಶಿಕ್ಷಕ ಕಲ್ಮಾಡಿ ಶೇಖರ ಪೂಜಾರಿ, ಯುವಜನರಿಗೆ ಕಲೆಯ ಬಗ್ಗೆ ಆಸಕ್ತಿ ಮೂಡಿಸಬೇಕು. ಜಾನಪದ ಆಚರಣೆಗಳಲ್ಲಿ ಯುವ ಜನರು ತೊಡಗಿಸಿಕೊಳ್ಳುವಂತೆ ಮಾಡಬೇಕು ಆಗ ಜಾನಪದ ಕಲೆಉಳಿದು ಮುಂದುವರಿಯುವುದು ಎಂದರು.
ಹಿರಿಯ ಸಾಹಿತ ಅಂಶುಮಾಲಿ ಮಣಿಪಾಲ ಪ್ರಶಸ್ತಿ ಪ್ರದಾನಗೈದರು. ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಂಗಳೂರು ರಥಬೀದಿ ಸ.ಪ್ರ.ದ. ಕಾಲೇಜಿನ ಪ್ರಾಧ್ಯಾಪಕ ಡಾ| ದುಗ್ಗಪ್ಪ ಕಜೆಕಾರ್ ಅಭಿನಂದನಾ ಮಾತುಗಳನಾಡಿ, ಜಾನಪದಲ್ಲಿ ಸೃಜನಶೀಲಗುಣವಿದೆ. ಕುಟುಂಬ ಪದ್ಧತಿ ಜಾನಪದದಿಂದ ಬೆಳೆದು ಬಂದಿದೆ. ಅದು ಮೌಲ್ಯಗಳನ್ನು ಕಲಿಸುತ್ತದೆ. ಕೃಷಿ ಸಂಸ್ಕೃತಿ ಇಂದು ಮರೆಯಾಗುತ್ತಿದೆ. ತುಳು ಭಾಷೆ, ಶಬ್ದಗಳನ್ನು ಉಳಿಸುವ ನಿಟ್ಟಿನಲ್ಲಿ ಇಂದು ಬಹಳಷ್ಟು ಸಾವಾಲುಗಳನ್ನು ಎದುರಿಸಬೇಕಾಗುತ್ತಿದೆ. ಯಾವುದೇ ಆಚರಣೆಗಳ ಅರ್ಥ ತಿಳಿದು ಅನುಸರಿಬೇಕು. ಮಕ್ಕಳಿಗೆ ನಮ್ಮ ಸಂಸ್ಕೃತಿ ತಿಳಿಸುವ ಕೆಲಸಾಗಬೇಕಿದೆ. ಮಾತೃ ಭಾಷೆಯಲ್ಲಿ ಮಾತನಾಡುವುದರಿಂದ ಆತ್ಮೀಯತೆ ಬೆಳೆಯುವುದು ಎಂದರು.
ವೈಕುಂಠ ಬಾಳಿಗ ಕಾನೂನು ಕಾಲೇಜಿನಪ್ರಾಂಶುಪಾಲೆ ಡಾ| ಸುರೇಖಾ ಕೆ. ಅವರನ್ನು ಸಮ್ಮಾನಿಸಲಾಯಿತು. ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಶುಭಹಾರೈಸಿದರು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷ ವಿನೋದ್ ಮಂಚಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದ ಸಂಚಾಲಕ ಭಾಸ್ಕರ ಸುವರ್ಣ ಸ್ವಾಗತಿಸಿದರು. ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ ಮುದ್ದು ಮೂಡುಬೆಳ್ಳೆ ಪ್ರಸ್ತಾವಿಸಿದರು. ಯುವ ವಾಹಿನಿ ಉಡುಪಿ ಘಟಕದ ಕಾರ್ಯದರ್ಶಿ ವಂದಿಸಿದರು. ತೇಜಸ್ ಬಂಗೇರ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


