ವಿಟಿಯು ಕಬಡ್ಡಿ: ವಿಸಿಇಟಿ ಪುತ್ತೂರು - ವಿಭಾಗ ಮಟ್ಟದಲ್ಲಿ ಚಾಂಪಿಯನ್, ರಾಜ್ಯಮಟ್ಟದಲ್ಲಿ ರನ್ನರ್‌ ಅಪ್

Upayuktha
0

 


ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪುರುಷರ ಕಬಡ್ಡಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡಿದೆ.

 

ಉಜಿರೆಯ ಎಸ್ಡಿಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮ್ಯಾಟ್ ಅಂಕಣದಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ರಾಜ್ಯಾದ್ಯಂತ ಎಂಟು ವಿಭಾಗದ ಒಟ್ಟು 16 ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಅತ್ಯುತ್ತಮ ನಿರ್ವಹಣೆಯನ್ನು ನೀಡಿದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ತಂಡವು ರನ್ನರ್ ಅಪ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ದ್ವಿತೀಯ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಗೌರವ್ ಎಸ್.ಜಿ ಉತ್ತಮ ದಾಳಿಗಾರ ವೈಯಕ್ತಿಕ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.

 

ಮೊದಲು ಅದೇ ಅಂಕಣದಲ್ಲಿ ನಡೆದ ಮಂಗಳೂರು ವಿಭಾಗಮಟ್ಟದ ಸ್ಪರ್ಧೆಯಲ್ಲಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ರಾಜ್ಯಮಟ್ಟಕ್ಕೆ ಅರ್ಹತೆಯನ್ನು ಗಳಿಸಿಕೊಂಡಿತ್ತು. ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದು, ದ್ವಿತೀಯ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಗೌರವ್.ಎಸ್.ಜಿ ಉತ್ತಮ ಆಲ್ರೌಂಡರ್ ಪ್ರಶಸ್ತಿಯನ್ನು ಮತ್ತು ಪ್ರಥಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಎಂ.ವಿಜೇತ್ ಪೂಜಾರಿ ಉತ್ತಮ ಡಿಫೆಂಡರ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.

 

ತೃತೀಯ ವರ್ಷದ ಮೆಕ್ಯಾನಿಕಲ್ ವಿಭಾಗದ ಭುವನ್ರಾಂ.ಜೆ. ಭಂಡಾರಿ ತಂಡದ ಕಪ್ತಾನನಾಗಿದ್ದು, ಪ್ರಥಮ ವರ್ಷದ ಎಐಎಂಎಲ್ ವಿಭಾಗದ ವಿಕಾಸ್.ಎಸ್.ಕೆ, ದ್ವಿತೀಯ ಎಲೆಕ್ಟ್ರಾನಿಕ್ಸ್ ವಿಭಾಗದ ತೇಜಶ್ವಿ, ದ್ವಿತೀಯ ವರ್ಷದ ಡಾಟಾ ಸೈನ್ಸ್ ವಿಭಾಗದ ಯಕ್ಷಿತ್, ಪ್ರಥಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಎಂ.ವಿಜೇತ್ ಪೂಜಾರಿ, ಪ್ರಥಮ ವರ್ಷದ ಎಂಬಿಎ ವಿಭಾಗದ ಕೌಶಿಕ್.ಬಿ, ಪ್ರಥಮ ವರ್ಷದ ಎಲೆಕ್ಟ್ರಾನಿಕ್ಸ್ ವಿಭಾಗದ ನೆಹಾಲ್.ಎಂ.ಪಿ, ಪ್ರಥಮ ವರ್ಷದ ಎಐಎಂಎಲ್ ವಿಭಾಗದ ಗೋಪಾಲ್.ಎಚ್.ಮಿರಿಂಗಾ, ತೃತೀಯ ವರ್ಷದ ಡಾಟಾ ಸೈನ್ಸ್ ವಿಭಾಗದ ಜಿ.ರಾಜಶೇಖರ್ ರೆಡ್ಡಿ, ತೃತೀಯ ವರ್ಷದ ಮೆಕ್ಯಾನಿಕಲ್ ವಿಭಾಗದ ನಿತ್ಯಾ.ಎನ್, ದ್ವಿತೀಯ ವರ್ಷದ ಎಲೆಕ್ಟಾçನಿಕ್ಸ್ ವಿಭಾಗದ ವಂಶಿಕ್ ಮತ್ತು ಪ್ರಥಮ ವರ್ಷದ ಮೆಕ್ಯಾನಿಕಲ್ ವಿಭಾಗದ ನಿತೀಶ್.ಕೆ.ಆರ್ ವಿಜೇತ ತಂಡದ ಆಟಗಾರರಾಗಿದ್ದಾರೆ.

 

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ತಂಡಕ್ಕೆ ತರಬೇತಿಯನ್ನು ನೀಡಿದ್ದಾರೆ. ವಿಜೇತ ತಂಡಕ್ಕೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ ಎಂದು ಪ್ರಾಂಶುಪಾಲ ಡಾ. ಮಹೇಶ್ಪ್ರಸನ್ನ ಕೆ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top