ಸಂತ ಫಿಲೋಮಿನಾ ಪ ಪೂ ಕಾಲೇಜಿನಲ್ಲಿ ಡಿಜಿಟಲ್‌ ಸಾಕ್ಷರತಾ ಕಾರ್ಯಾಗಾರ ಸಮಾರೋಪ

Upayuktha
0

 


ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ  ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಏಪ್ರಿಲ್ 6 ರಿಂದ 30 ವರೆಗೆ ಪುತ್ತೂರಿನ ಆಸುಪಾಸಿನಲ್ಲಿ ಕಲಿಯುತ್ತಿರುವ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ 20 ದಿನಗಳ 60 ಗಂಟೆಗಳ ಕಂಪ್ಯೂಟರ್ ಸಾಕ್ಷರತಾ ಕಾರ್ಯಗಾರವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ  ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ವಂ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಬಿಡುವಿನ ಸಮಯವನ್ನು ವ್ಯರ್ಥ ಮಾಡದೇ ಇಂತಹ ತರಬೇತಿಗಳಲ್ಲಿ ಪಾಲ್ಗೊಂಡು ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಸಹಕಾರಿಯಾಗಲಿದೆ. ಮುಂದಿನ ದಿನಗಳಲ್ಲಿ ಪುತ್ತೂರು ಆಸುಪಾಸಿನ ಎಲ್ಲಾ ವಿದ್ಯಾರ್ಥಿಗಳಿಗೆ ಇಂತಹ ತರಬೇತಿಗಳನ್ನು ಬೃಹತ್ ಆಗಿನಡೆಸುವುದು ನಮ್ಮ ಯೋಜನೆಯಾಗಿದೆ ಎಂದರು.


ವಿವಿಧ ಶಾಲಾ ಕಾಲೇಜುಗಳ ಒಟ್ಟು  27 ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು. ಗಣಕ ವಿಭಾಗದ ಮುಖ್ಯಸ್ಥ ಗೋವಿಂದ ಪ್ರಕಾಶ್ ಪ್ರಾಸ್ತಾವಿಕ ಮಾತನಾಡಿ, ಉಪನ್ಯಾಸಕ ಚಂದ್ರಾಕ್ಷ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top