ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಧರ್ಮಸ್ಥಳದಲ್ಲಿ

Upayuktha
0



ಚಿತ್ರ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಾಗ ಕ್ಯಾ. ಬ್ರಿಜೇಷ್‌ ಚೌಟ ಅವರು ಸ್ವಾಗತಿಸಿದರು. ನಂತರ ಧರ್ಮಸ್ಥಳಕ್ಕೆ ತೆರಳಿದರು.

ಉಜಿರೆ:  ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ವಾಯುಪಡೆಯ ವಿಶೇಷ ಹೆಲಿಕಾಪ್ಟರ್‌ನಲ್ಲಿ ಧರ್ಮಸ್ಥಳಕ್ಕೆ ಶನಿವಾರ ಸಂಜೆ ಆಗಮಿಸಿದರು.


ಅವರಿಗೆ ಧರ್ಮಸ್ಥಳ ಹೆಲಿಪ್ಯಾಡ್‌ನಲ್ಲಿ ಗೌರವಪೂರ್ವಕ ಸ್ವಾಗತ ಕೋರಲಾಯಿತು. ಅವರನ್ನು ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್ ಕ್ಷೇತ್ರದ ಪರವಾಗಿ ಸ್ವಾಗತಿಸಿದರು. ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.


ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ಶನಿವಾರ ರಾತ್ರಿ ತಂಗಿದ ಅವರು ಇಂದು ಭಾನುವಾರ ಮುಂಜಾನೆ ದೇವರ ದರ್ಶನ ಮಾಡಿ ವಿಶೇಷ ಪೂಜೆ  ಸಲ್ಲಿಸುತ್ತಾರೆ. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗುವರು.


ಅನ್ನಪೂರ್ಣ ಭೋಜನಾಲಯ ಮತ್ತು ಸಾನ್ನಿಧ್ಯ ಸರದಿ ಸಾಲು ವ್ಯವಸ್ಥೆ (ಕ್ಯೂ ಕಾಂಪ್ಲೆಕ್ಸ್) ವೀಕ್ಷಿಸುವರು.


ಪೂರ್ವಾಹ್ನ 10 ಗಂಟೆಗೆ ಅಮೃತವರ್ಷಿಣಿ ಸಭಾಭವನದಲ್ಲಿ ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಉದ್ಘಾಟಿಸುವರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top