ಮಂಗಳೂರು: ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಷನ್ ಮತ್ತು ಕೆಎಂಸಿ ಮಂಗಳೂರು ಸಹಯೋಗದಲ್ಲಿ ನಗರದ ಅತ್ತಾವರ ಕೆಎಂಸಿಯಲ್ಲಿ ಆರ್ಥೋಪೆಡಿಕ್ಸ್‌ನಲ್ಲಿ 3ಡಿ ಮುದ್ರಣದ ಕುರಿತು ವೈದ್ಯಕೀಯ ಶಿಕ್ಷಣ ಕಾರ್ಯಾಗಾರ ನಡೆಯಿತು. ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಷನ್‌ನ ಅಧ್ಯಕ್ಷ ಡಾ. ಬಿ. ಸಚ್ಚಿದಾನಂದ ರೈ, ಕೆಎಂಸಿ ಮಂಗಳೂರಿನ ಅಸೋಸಿಯೇಟ್ ಡೀನ್ ಡಾ. ಅಶ್ಫಾಕ್ ಮಹಮ್ಮದ್ ಮತ್ತು ಸಿಒಎಸ್ ಅಧ್ಯಕ್ಷ ಡಾ. ಸುದೀಪ್ ಶೆಟ್ಟಿ ಕಾರ್ಯಾಗಾರ ಉದ್ಘಾಟಿಸಿದರು.
ಕಾರ್ಯಾಗಾರದ ಸಂಘಟನಾ ಅಧ್ಯಕ್ಷ ಡಾ. ಆತ್ಮಾನಂದ ಶೆಟ್ಟಿ ಸ್ವಾಗತಿಸಿ, ಸಂಘಟನಾ ಕಾರ್ಯದರ್ಶಿ ಡಾ. ಚೇತನ್ ಶೆಟ್ಟಿ ವಂದಿಸಿದರು. ನೂರಕ್ಕೂ ಅಧಿಕಮೂಳೆ ಶಸ್ತ್ರಚಿಕಿತ್ಸಕರು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


