ನಾವು ಹಿಂದಿನ ಗ್ರಾಮೀಣ ಮಹಿಳೆಯರಲ್ಲ-ಇಂದು ವಿಶ್ವ ಮಾನ್ಯತೆ ಪಡೆದವರು

Upayuktha
0


“ಪುಟ್ಟಮರಿ ಪುಟ್ಟಮರಿ ಏನು ಮಾಡುವೆ? 

ಹಾಲು ಕುಡಿದುಗಟ್ಟಿಯಾಗಿ ನಾನು ಆಡುವೆ”


ಹಾಡಿನ ಈ ಸಾಲುಗಳನ್ನು ಕೇಳಿದಾಗ ನಿಮ್ಮಕಣ್ಣು ಮುಂದೆ ಏನು ಬರುತ್ತದೆ? ಕೃಷ್ಣನ ಬಾಲರೂಪದಲ್ಲಿ ನಾವು ಅನೇಕ ಚಿತ್ರಗಳಲ್ಲಿ, ಕ್ಯಾಲೆಂಡರ್‍ಗಳಲ್ಲಿ, ಹಾಲು ಕುಡಿಯುತ್ತಾ, ಕೈಯಲ್ಲಿ ಬೆಣ್ಣೆ ಹಿಡಿದುಕೊಂಡಿರುವ ಮುದ್ದು ಬಾಲಕೃಷ್ಣನ ಚಿತ್ರ ನಮ್ಮಕಣ್ಣ ಮುಂದೆ ಬರುತ್ತದೆ. ಹಿಂದಿನ ಕಾಲದಲ್ಲಿ ಮಕ್ಕಳಿಗೆ ಹುಟ್ಟಿದ ನಂತರತಾಯಿಯ ಹಾಲು, ನಂತರ ಮೇಲಿನ(ಹಸುವಿನ) ಹಾಲು ಹಾಗೂ ಮೂರರಿಂದಐದು ವರ್ಷವಾಗುವವರೆಗೆ ಪ್ರತಿನಿತ್ಯ ಹಸಿವಿನ ಹಾಲನ್ನುಕೊಡುತ್ತಿದ್ದರು.


ಈ ಸಂದರ್ಭದಲ್ಲಿ ಮಕ್ಕಳಿಗೆ ಹಾಲು ಕೊಡುವತಾಯಂದಿರಜೊತೆಗೆ ಈ ಹಾಲು ಉತ್ಪಾದಿಸುವ ಹೈನುಗಾರಿಕೆಯಕ್ಷೇತ್ರದಲ್ಲಿ ಅನೇಕ ಭಾರತೀಯ ಮಹಿಳೆಯರಿದ್ದಾರೆ. ಮಹಿಳೆಯರ ಸಬಲೀಕರಣಎಂದು ಗಮನಿಸಿದಾಗ ಭಾರತದ ಸಾವಿರಾರು ಹಳ್ಳಿಗಳಲ್ಲಿ ಮಹಿಳೆಯರು ಹೈನುಗಾರಿಕೆಕ್ಷೇತ್ರದಲ್ಲಿತಮ್ಮನ್ನುತಾವೇ ತೊಡಗಿಸಿಕೊಂಡು ವೈಯಕ್ತಿಕವಾಗಿಅಥವಾ ಸಾಮೂಹಿಕವಾಗಿ ಸಹಕಾರತತ್ವದ ಡೈರಿಗಳ ಮೂಲಕ ತಾವು, ತಮ್ಮಕುಟುಂಬ, ತಮ್ಮ ಹಳ್ಳಿ ಇವುಗಳನ್ನು ಅಭಿವೃದ್ಧಿಪಡಿಸಿರುವುದಲ್ಲದೇ ರಾಷ್ಟ್ರೀಯಅಭಿವೃದ್ಧಿಗೂ ಸತತತಮ್ಮ ಹಾಲು ಕೊಡುತ್ತಾ, ಪುರುಷರೊಂದಿಗೆ ಸರಿಸಮಾನವಾಗಿ ಹೈನುಗಾರಿಕೆಕ್ಷೇತ್ರದಅಭಿವೃದ್ಧಿಯಅರಿಕಾರರಾಗಿದ್ದಾರೆ.


ಈಗಲೂ ಎಷ್ಟೋ ಜನ ಬೆಳಗ್ಗೆ ಒಂದುಗ್ಲಾಸ್ ಹಾಲು ಕುಡಿಯುತ್ತಾರೆ. ಹಾಗೂ ರಾತ್ರಿ ಮಲಗುವ ಮುಂಚೆ ಒಂದು ಲೋಟ ಬಿಸಿಹಾಲನ್ನುಕುಡಿದು ಮಲಗುವ ಪದ್ಧತಿ ಬಹಳ ಜನರಲ್ಲಿದೆ. ಸ್ವಲ್ಪ ನೆಗಡಿ, ಕೆಮ್ಮು, ಮೈಕೈನೋವಿದ್ದರೆ, ರಾತ್ರಿ ಮಲಗುವ ಮೊದಲುಕುಡಿಯುವಒಂದುಗ್ಲಾಸ್ ಹಾಲಿಗೆ ಕೊಂಚ ಅರಿಶಿನ, ಒಂದೆರಡುಜಜ್ಜಿದ ಮೆಣಸು ಹಾಕಿ ಕುಡಿದರೆ, ಚೆನ್ನಾಗಿರಾತ್ರಿ ನಿದ್ದೆ ಬರುವುದಲ್ಲದೇ ಬೆಳಗ್ಗಿನ ಹೊತ್ತಿಗೆಆರೋಗ್ಯ ಸುಧಾರಿಸಿಕೊಳ್ಳುತ್ತದೆ ಎಂಬ ಅನುಭವ ನನ್ನಂತಹವರದು. ಆರೋಗ್ಯರಕ್ಷಣೆಗೆ ಹಾಲು ಪರಿಪೂರ್ಣಆಹಾರಎಂದುತಜ್ಞರು ಹೇಳುತ್ತಾರೆ. ನಂತರದಕಾಲದಲ್ಲಿ ಹಸು/ಎಮ್ಮೆ ಹಾಲಿಗೆ ಪರ್ಯಾಯವಾಗಿ ಅನೇಕ ಕೃತಕ ಹಾಲಿನ ಪುಡಿಗಳು, ಸುವಾಸನೆ ಬೀರುವ ಹಾಲು, ಇವೆಲ್ಲಾ ಮಾರುಕಟ್ಟೆಗೆ ಬಂದಿವೆ. ಈ ಹಿನ್ನೆಲೆಯಲ್ಲಿಇಡೀ ವಿಶ್ವದಲ್ಲಿಜೂನ್‍ಒಂದರಂದು “ವಿಶ್ವ ಹಾಲಿನ ದಿನ”ವನ್ನುಆಚರಿಸುತ್ತಾರೆ. ಹೀಗಾಗಿ ಈ ದಿನದ ಮಹತ್ವವನ್ನು ಸಂಕ್ಷಿಪ್ತವಾಗಿ ಈಗ ತಿಳಿಯೋಣ.


ಜೂನ್‍ ಒಂದರಂದು ವಿಶ್ವದಾದ್ಯಂತಆಚರಿಸುವ ವಿಶ್ವ ಹಾಲು ದಿನಾಚರಣೆಯಂದು ಹಾಲು ಹಾಗೂ ಅದಕ್ಕೆ ಸಂಬಂಧಪಟ್ಟ ಹೈನುಗಾರಿಕೆ ವಿಭಾಗದ ಬಗ್ಗೆ ಕೊಂಚ ಗಮನಿಸೋಣ.


ಈ ದಿನಾಚರಣೆಯಕೇಂದ್ರೀಕೃತ ಗಮನವು ಜನರ ಪಥ್ಯ-ಆಹಾರದಲ್ಲಿಯ ಹಾಲಿನ ಮಹತ್ವದಅರಿವಿನ ಬಗ್ಗೆ ಇದೆ. ಒಂದೆಡೆ ನಮ್ಮಆಹಾರಉತ್ಪಾದನೆಯ ಮೇಲೆ ಹಾಲಿನ ಪರಿಣಾಮ ಗಮನಿಸಿದರೇ ಇನ್ನೊಂದೆಡೆ ಹೈನುಗಾರಿಕೆಯಲ್ಲಿಇರುವವರಜೀವನ ಮಟ್ಟದ ಬಗ್ಗೆ ಇದೆ. ಹಾಲಿನ ಉತ್ಪನ್ನಗಳಾದ, ಮೊಸರು, ಬೆಣ್ಣೆ, ಚೀಸ್, ಪನ್ನೀರ್‍ಇವೆಲ್ಲಾ ನಮ್ಮದೇಹಕ್ಕೆಅವಶ್ಯಕವಾದ ಜೀವಸತ್ವಗಳು, ಖನಿಜಗಳು, ಇವುಗಳನ್ನು ಪೂರೈಸಿ ನಮ್ಮಜೀವನಶೈಲಿಯನ್ನುಆರೋಗ್ಯವಂತಜೀವನಕ್ಕೆಕೊಂಡೊಯ್ಯುವುದು. ಹಾಲು ನಮ್ಮ ಮೂಳೆಗಳ ರಕ್ಷಣೆಗೆ ಬೇಕಾದಕ್ಯಾಲ್ಸಿಯಂನ್ನುಕೊಡುತ್ತದೆ. ಅಲ್ಲದೇ ನಮಗೆ ಬೇಕಾದಉತ್ತಮಗುಣಮಟ್ಟದ ಸಸಾರಜನಕ, ಅತ್ಯಾವಶ್ಯಕವಾದ ಬಿ-12 ಹಾಗೂ ಡಿ ಜೀವಸತ್ವಗಳನ್ನು ಪೂರೈಸುತ್ತದೆ. ಅಲ್ಲದೇಇದು ಹೃದಯರೋಗ, ಮಂಡಿಯ ಮೂಳೆ ಸವೆಯುವುದು, ಹಾಗೂ ಮಧುಮೇಹ-2 ಇವುಗಳ ಅಪಾಯವನ್ನುಕಡಿಮೆ ಮಾಡುತ್ತದೆ. ಅಲ್ಲದೇ ಹಾಲು ಪೋಟ್ಯಾಸಿಯಂದ ಉತ್ತಮ ಮೂಲವಾಗಿದ್ದು, ಇದುರಕ್ತದಒತ್ತಡವನ್ನು ನಿಯಂತ್ರಿಸುತ್ತದೆ. 


2025ರಲ್ಲಿ ಚಿಲಿ ದೇಶದ ಸಾಂಟಿಯಾಗೋದಲ್ಲಿ ನಡೆದಐ.ಡಿ.ಎಫ್. ವಿಶ್ವ ಹೈನುಗಾರಿಕೆ ಸಮಾವೇಶದಲ್ಲಿ, ಭಾರತದರಾಷ್ಟ್ರೀಯಡೈರಿಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಮೀನೇಶ್ ಷಾಅವರುತಮ್ಮಉಪನ್ಯಾಸದಲ್ಲಿ ಹೈನುಗಾರಿಕೆಕ್ಷೇತ್ರದಲ್ಲಿಯ ಮಹಿಳೆಯರ ಸಬಲೀಕರಣಕ್ಕಾಗಿ ಭಾರತದೇಶದ ಮುಖ್ಯ ಘಟ್ಟಗಳ ಬಗ್ಗೆ ಒತ್ತಿ ಹೇಳಿದರು. ಭಾರತದೇಶದಲ್ಲಿ ವಿಶ್ವದಲ್ಲೇಅತ್ಯಂತದೊಡ್ಡ ಹಾಲು ಉತ್ಪಾದನೆಯನ್ನು ಸಾಧಿಸಿರುವುದರ ಜೊತೆಗೆದೇಶದಾದ್ಯಂತಗ್ರಾಮೀಣಸಮುದಾಯಗಳಲ್ಲಿಯ ಮಹಿಳೆಯರ ಸಾಮಾಜಿಕ ಪರಿವರ್ತನೆಗೆ ವೇಗ ದೊರತಿರುವುದರ ಬಗ್ಗೆ ಇವರು ವಿವರಿಸಿದರು. ನಮ್ಮದೇಶದಲ್ಲಿ ಸಣ್ಣ ಪ್ರಮಾಣದ ಕೃಷಿ ವ್ಯವಸ್ಥೆಇರುವುದರಿಂದ, ದೇಶದಲ್ಲಿಯ 2,30000ಗ್ರಾಮೀಣ ಹಾಲು ಸಹಕಾರ ಸಂಸ್ಥೆಗಳು ಹದಿನೆಂಟುದಶಲಕ್ಷಕ್ಕಿಂತ ಹೆಚ್ಚು ಕುಟುಂಬಗಳಿಗೆ ಜೀವನ ನೀಡಿವೆ. ಸಹಕಾರಿಕ್ಷೇತ್ರದ ಸದಸ್ಯರಲ್ಲಿ ಮೊದಲು 35% ಜನ ಮಹಿಳೆಯರಿದ್ದರು. ಇದು ಸತತವಾಗಿ ಬೆಳೆಯುತ್ತಾ ಒಟ್ಟೂ ಸದಸ್ಯತ್ವದಲ್ಲಿ 50%ರಷ್ಟು ಈಗ ಮಹಿಳೆಯರಿದ್ದಾರೆ. ನಮ್ಮ ಪ್ರತಿನಿತ್ಯದಡೈರಿ ವ್ಯವಸ್ಥೆ ಬೇರೆ ದೇಶಗಳಿಗಿಂತ ಭಿನ್ನವಾಗಿದೆ. ಇದು ಸಣ್ಣ ಪ್ರಮಾಣದ ಹೈನುಗಾರಿಕೆ ಕೃಷಿ ವ್ಯವಸ್ಥೆ. ಇಲ್ಲಿಉತ್ಪಾದನೆ ಮಾಡುವವರು ಸಹಸ್ರಾರುಜನ 92% ಪ್ರಮಾಣ ಹೈನುಗಾರಿಕೆ ಕೃಷಿ ಮಾಡುವವರಲ್ಲಿ 92% ಜನಒಂದರಿಂದ ನಾಲ್ಕು ಹಸು ಅಥವಾಎಮ್ಮೆ ಹೊಂದಿದ್ದಾರೆ. ಇದು 80 ದಶಲಕ್ಷಗ್ರಾಮೀಣ ಮನೆಗಳ ಜೀವನಕ್ಕೆ ಅನುಕೂಲ ಒದಗಿಸಿ ಕೊಟ್ಟಿದ್ದು, ಹಾಲಿನಿಂದಕುಟುಂಬದ ಸದಸ್ಯರಿಗೆ ಪೌಷ್ಠಿಕತೆದೊರೆಯುತ್ತಿದೆ. ಸಹಕಾರತತ್ವದ ಈ ಮಾದರಿ ಸದ್ಯದಲ್ಲಿ ಮಹಿಳಾ ಸಬಲೀಕರಣದಒಂದುದಾರಿಯಾಗಿದೆ. ಇದುಅವರವರ ಮನೆಗಳಲ್ಲೇ ಹೆಚ್ಚು ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯ ಹಾಗೂ ಅಧಿಕಾರ ಕೊಡಿಸಿದೆ. ಅಲ್ಲದೇಡಿಜಿಟಲೀಕರಣಇವರಿಗೆ ಬ್ಯಾಂಕ್‍ಖಾತೆ ಸಂಪರ್ಕ, ಅನನ್ಯತೆಯದೃಢೀಕರಣಕೊಟ್ಟಿರುವುದರಿಂದ ಹೆಚ್ಚು ಹೆಚ್ಚು ಮಹಿಳೆಯರು ಸಹಕಾರಿ ಸಂಸ್ಥೆಗಳ ಸದಸ್ಯರಾಗುತ್ತಿದ್ದಾರೆ. ಒಟ್ಟೂ ಸಹಕಾರಿ ಸಂಸ್ಥೆಗಳು ಪ್ರತಿದಿನ 68 ದಶಲಕ್ಷ ಲೀಟರ್ ಹಾಲು ಸಂಗ್ರಹಿಸಿದರೆ ಮಹಿಳೆಯರು 24 ದಶಲಕ್ಷ ಲೀಟರ್ ಹಾಲಿನ ತಮ್ಮ ಸಂಗ್ರಹದ ಪಾಲನ್ನುಕೊಡುತ್ತಿದ್ದಾರೆ.


ಮಹಿಳೆಯರಿಗೆ ಇದರಿಂದ ಸಂಪಾದನೆಗೆ ನೇರ ಮಾರ್ಗ ಸಿಕ್ಕಿದ್ದು, ಕುಟುಂಬದಕಲ್ಯಾಣಕ್ಕಾಗಿ, ಶಿಕ್ಷಣ, ಆರೋಗ್ಯ, ಉತ್ತಮಜೀವನ ಮಟ್ಟಗಳಿಗಾಗಿ ಅವರು ಈ ಹಣವನ್ನುತೊಡಗಿಸಲು ಅವಕಾಶ ಸೃಷ್ಟಿಸಲಾಗಿದೆ. ಇದು ಮಹಿಳೆಯರ ವಿಶ್ವಾಸ ಹೆಚ್ಚು ಮಾಡಿಅವರುಕುಟುಂಬ ಹಾಗೂ ಸಮುದಾಯಗಳ ವಿಷಯಗಳಲ್ಲಿ ನಿರ್ಧಾರ ಮಾಡುವ ಮುಖ್ಯ ಪಾತ್ರವನ್ನುಕೊಟ್ಟಿದೆ. ಗಮನಿಸಿ ನೋಡಿದರೆ, ಹೈನುಗಾರಿಕೆಗೆ ಸಂಬಂಧಪಟ್ಟ ಕೆಲಸಗಳಲ್ಲಿ ಶೇಕಡಾ 60 ರಿಂದ ಶೇಕಡಾ 95 ರವರೆಗೆಇವರು ಹೆಚ್ಚಿನಜವಾಬ್ದಾರಿತೆಗೆದುಕೊಂಡಿದ್ದಾರೆ. ಶೇಕಡಾ 50 ರಷ್ಟು ನಿರ್ಧಾರ ತೆಗೆದುಕೊಳ್ಳುವಲ್ಲಿ ಇವರು ಸಫಲರಾಗಿದ್ದಾರೆ.


ಇಡೀಜಗತ್ತಿನಲ್ಲಿ ವಿಶ್ವ ಹಾಲು ದಿನಗಳಂದು ಹಾಲು ಕರೆಯುವ ಪ್ರದರ್ಶನಗಳು, ಕೃಷಿ ಭೂಮಿಗೆ ಭೇಟಿ, ಆಟಗಳು, ಸ್ಪರ್ಧೆಗಳು, ಸಂಗೀತ ಕಾರ್ಯಕ್ರಮಗಳು, ಹಾಲಿನ ಉತ್ಪನ್ನಗಳ ಹಂಚಿಕೆ, ನಡೆಯುತ್ತವೆ. ಇದೇ ದಿನ ಹೆಚ್ಚಿನದನ್ನು ತಿಳಿದು ಕಲಿಯಲು ಹಾಗೂ ಅನುಭವಗಳನ್ನು ಹಂಚಿಕೊಳ್ಳಲು ಸಮಾವೇಶಗಳು ಹಾಗೂ ವಿಚಾರ ಸಂಕೀರ್ಣಗಳು ನಡೆಯುತ್ತವೆ.


ನಮ್ಮ ದೇಶದಲ್ಲಿಯ ಹೈನುಗಾರಿಕೆ ವಿಭಾಗದಲ್ಲಿ ಮಹಿಳೆಯರ ಸಬಲೀಕರಣದ ಪ್ರಭಾವಕ್ಕೆಅಂತರ್‍ರಾಷ್ಟ್ರೀಯ ಮಾನ್ಯತೆ ಸಿಕ್ಕಿದ್ದು, ಐ.ಡಿ.ಎಫ್. ಸಂಶೋಧನಾ ಪ್ರಶಸ್ತಿ ಸಹ ಸಿಕ್ಕಿದೆ. ಸೃಜಾಉತ್ಪಾದನಾ ಸಂಘದಅಧ್ಯಕ್ಷರಾದ ಶ್ರೀದೇವಿ ಅವರನ್ನು ಗಮನಿಸಿದರೆ ಒಬ್ಬ ಸಾಮಾನ್ಯ ಹಾಲು ಉತ್ಪಾದಕರ ಸ್ಥಾನದಿಂದ ನಾಯಕರಾಗಿ ಮುಂದೆ ಬಂದಿರುವಇವರ ಪರಿವರ್ತನಾ ಪ್ರಯಾಣವನ್ನು ಗಮನಿಸಬಹುದು. ಇವರ ಮಗಳು ಈಗ ಅಮೆರಿಕಾದಲ್ಲಿ ಉಚ್ಛ ಶಿಕ್ಷಣ ಪಡೆಯುತ್ತಿದ್ದಾಳೆ. ಇಂತಹ ಹಲವಾರು ಉದಾಹರಣೆಗಳಿಂದ ಮಹಿಳೆಯರು ತಮ್ಮ ಸಾಂಪ್ರದಾಯಿಕ ಪಾತ್ರಗಳಿಗೆ ಹೊಸ ರೂಪವನ್ನುಕೊಟ್ಟಿದ್ದಾರೆ. ಗ್ರಾಮೀಣಉತ್ಪಾದನಾಕಾರ್ಯದ ಬೇರಿನಿಂದ ಹೊರಟು ವಿಶ್ವದ ಮಾನ್ಯತೆಯನ್ನು ಪಡೆದಿದ್ದಾರೆ. ಇವರ ಅನುಭವಗಳಿಂದ ತಿಳಿಯುವುದೇನೆಂದರೆ, ಆರ್ಥಿಕ ಸಬಲೀಕರಣದ ಪ್ರಭಾವದಿಂದ ವಿಶಾಲ ಸಾಮಾಜಿಕ ಪರಿಣಾಮವನ್ನು ಹೊಂದಿ ಮುಖ್ಯ ಕ್ಷೇತ್ರಗಳಲ್ಲಿ ಮಹಿಳಾ ಭಾಗವಹಿಸುವಿಕೆಗೆ ಸತತ ಬೆಂಬಲ ದೊರೆಯಲು ಇವು ಕಾರಣೀಭೂತವಾಗಿವೆ.


-ಎನ್.ವ್ಹಿ. ರಮೇಶ್

ನಿವೃತ್ತಕಾರ್ಯಕ್ರಮ ಅಧಿಕಾರಿಗಳು, ಆಕಾಶವಾಣಿ

ಮೈಸೂರು, ಮೊ: 9606965238


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top