ಯಡಿಯೂರಪ್ಪ ಅಭಿಮಾನೋತ್ಸವ ಸಿದ್ದತಾ ಸಭೆ

Upayuktha
0


 

ಬಳ್ಳಾರಿ: ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮೇ 9 ರಂದು ಚಿತ್ರದುರ್ಗದಲ್ಲಿ ನಡೆಯುವ ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನದ ಅಭಿಮಾನೋತ್ಸವ ಪೂರ್ವ ಸಿದ್ದತಾ ಸಭೆ ನಡೆಯಿತು.

ನಗರದ ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ, ಮಾಜಿ ಸಂಸದ ಸಣ್ಣ ಪಕ್ಕೀರಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಅನಿಲ್ ನಾಯ್ಡು, ಮಾಜಿ ಅಧ್ಯಕ್ಷ ಗುತ್ತಿಗನೂರು ವಿರೂಪಾಕ್ಷಗೌಡ, ಬಿಚ್ಚುಗಲ್ಲು ಪಂಚಾಕ್ಷರಪ್ಪ ಮೊದಲಾದವರು ಅಭಿಮಾನೋತ್ಸವಕ್ಕೆ ಜಿಲ್ಲೆಯಿಂದ ಯಡಿಯೂರಪ್ಪ ಅವರ ಅಭಿಮಾನಿಗಳನ್ನು ಕರೆದುಕೊಂಡು ಹೋಗುವ ಕುರಿತು ಚರ್ಚೆ ನಡೆಸಿದರು.

ವೇಳೆ ಜಿಲ್ಲೆಯಲ್ಲಿ ಯಡಿಯೂರಪ್ಪ ಅಭಿಮಾನಿಗಳ ಮತ್ತು ವೀರಶೈವ ಲಿಂಗಾಯತ ಸಮಾಜದ ಮುಖಂಡರುಗಳ ಸಭೆಯನ್ನು ನಗರದ ವೀರಶೈವ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ನಡೆಸಲು ನಿರ್ಧರಿಸಲಾಯ್ತು.

ಸಭೆಯಲ್ಲಿ ಮುಖಂಡರುಗಳಾದ, ಎಸ್.ಮಲ್ಲನಗೌಡ, ಶ್ರಿನಿವಾಸ್ ಮೋತ್ಕರ್, ಬಣಾಪುರ ನಾಗರಾಜಗೌಡ, ಕಪ್ಪಗಲ್ಲು ಶಿವರುದ್ರಪ್ಪ, ಹೊನ್ನನಗೌಡ, ನಡವಿ ವೀರನಗೌಡ, ಹಲಕುಂದಿ ವೀರನಗೌಡ, ಜಡೇಗೌಡ ಮೊದಲಾದವರು ಇದ್ದರು.

 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top