ಜಿ.ಟಿ.ಟಿ.ಸಿ ಯಲ್ಲಿ ಡಿಪ್ಲೋಮಾ ಕೋರ್ಸ್ ಗಳಿಗೆ ಪ್ರವೇಶಾತಿ: ಅರ್ಜಿ ಆಹ್ವಾನ

Upayuktha
0


 


ಉಡುಪಿ: ಆತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ರಾಜ್ಯ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ), ಉಡುಪಿ ಸಂಸ್ಥೆಯಲ್ಲಿ ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್, ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನುಫ್ಯಾಕ್ಚರಿಂಗ್ನಲ್ಲಿ ಸೀಟುಗಳ ಹಂಚಿಕೆ ಆನ್ಲೈನ್ ಅರ್ಜಿ ಸಲ್ಲಿಕೆ ಮೂಲಕ ನಡೆಯುತ್ತಿದೆ.


ಮೊದಲನೇ ಸುತ್ತಿನ ಆನ್ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಮೇ 10 ಕೊನೆಯ ದಿನವಾಗಿದೆ. ಮೇ 15 ರಿಂದ 20 ವರೆಗೆ ಮೊದಲನೇ ಸುತ್ತಿನ ಸೀಟು ಹಂಚಿಕೆ ಮತ್ತು ಪ್ರವೇಶಾತಿ ಪ್ರಕ್ರೀಯೆ ನಡೆಯಲಿದೆ.


ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅಥವಾ ಜಿ.ಟಿ.ಟಿ.ಸಿ ಸಂಸ್ಥೆಯಲ್ಲಿ ದಾಖಲಾತಿಗಳನ್ನು ಸಲ್ಲಿಸಿದಲ್ಲಿ ವಿದ್ಯಾರ್ಥಿಗಳ ಪರವಾಗಿ ಆನ್ಲೈನ್ ಅರ್ಜಿ ಸಲ್ಲಿಸಲಾಗುವುದು. .ಟಿ. ಮತ್ತು ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ನೇರವಾಗಿ ಎರಡನೇ ವರ್ಷದ ಡಿಪ್ಲೋಮಾ ಕೋರ್ಸ್ಗೆ ಪ್ರವೇಶ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ), ಕೊಳಲಗಿರಿ, ಉಪ್ಪೂರು, ಉಡುಪಿ ಮೊ.ನಂ: 9880510585 ಅಥವಾ 8618760169 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top