ಮುಖ್ಯಗುರುಗಳಾಗಿ ಅಧಿಕಾರ ಸ್ವೀಕರಿಸಿದ ಸಿದ್ದಲಿಂಗಮ್ಮನವರಿಗೆ ಸನ್ಮಾನ

Upayuktha
0

 


ಬಳ್ಳಾರಿ: ನಗರದ ಮಹಾನಂದಿ ಕೊಟ್ಟಂನ ಡಾ. ಬಿ.ಆರ್. ಅಂಬೇಡ್ಕರ್ ನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಡ್ತಿ  ಹೊಂದಿ ಮುಖ್ಯಗುರುಗಳಾಗಿ ನೇಮಕಗೊಂಡ ಸಿದ್ದಲಿಂಗಮ್ಮ ಎಲ್ ಅವರು ಸೋಮವಾರ ಕರ್ತವ್ಯಕ್ಕೆ ಅಧಿಕೃತವಾಗಿ ಹಾಜರಾದರು

 

ಹಿನ್ನೆಲೆಯಲ್ಲಿ ಶಾಲೆಯ ಶಿಕ್ಷಕರು, ಶಿಕ್ಷಣಾಭಿಮಾನಿಗಳು ಹಾಗೂ ಸ್ಥಳೀಯ ಮುಖಂಡರಿಂದ ಆತ್ಮೀಯ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಸಿದ್ದಲಿಂಗಮ್ಮ ಅವರಿಗೆ ಶಾಲಾ ಸಿಬ್ಬಂದಿ ಪುಷ್ಪಗುಚ್ಛ ನೀಡಿ ಶಾಲು ಹೊದಿಸಿ ಗೌರವಿಸಿದರು

 

ಹಲವು ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಶಿಸ್ತು ಹಾಗೂ ಸಾಮಾಜಿಕ ಮೌಲ್ಯಗಳ ಬೆಳವಣಿಗೆಗೆ ವಿಶೇಷ ಕೊಡುಗೆ ನೀಡಿದ್ದಾರೆ ಎಂದು ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದರು.

 

ಸಂದರ್ಭದಲ್ಲಿ ಮಾತನಾಡಿದ ಶಿಕ್ಷಕರ ಸಂಘದ ಅಧ್ಯಕ್ಷ ನಿಂಗಪ್ಪ, ಸಿದ್ದಲಿಂಗಮ್ಮ ಅವರು ಶಿಕ್ಷಕ ವೃತ್ತಿಯಲ್ಲಿ ಶ್ರಮ, ಪ್ರಾಮಾಣಿಕತೆ ಮತ್ತು ವಿದ್ಯಾರ್ಥಿಗಳ ಮೇಲಿನ ಕಾಳಜಿಯಿಂದ ಗುರುತಿಸಿಕೊಂಡಿದ್ದಾರೆಅವರ ಬಡ್ತಿ ಶಿಕ್ಷಕರ ಸಮುದಾಯಕ್ಕೆ ಸಂತಸದ ವಿಷಯವಾಗಿದೆ. ಅವರ ಆಡಳಿತದಲ್ಲಿ ಶಾಲೆ ಇನ್ನಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಹೇಳಿದರು.

 

ದಲಿತ ಹಿರಿಯ ಸಾಹಿತಿ ಎನ್.ಡಿ. ವೆಂಕಮ್ಮ ಮಾತನಾಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಮರ್ಪಿತ ಮನೋಭಾವದ ಶಿಕ್ಷಕರು ಅಗತ್ಯವಾಗಿದ್ದು, ಸಿದ್ದಲಿಂಗಮ್ಮ ಅವರು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿರುವುದು ಶ್ಲಾಘನೀಯ ಎಂದರು.

 

ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ನಿಂಗಪ್ಪ , ಕುರುಗೋಡು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಶಿವಶಂಕರ, ಕೋಶಾಧ್ಯಕ್ಷ ಶೈಕ್ಷವಲಿ ಪಿ, ಕುರುಗೋಡು ತಾಲ್ಲೂಕು ಸರ್ಕಾರಿ ನೌಕರರ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ಸ್ವಾಮಿ, ಎನ್.ಪಿ.ಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಪ್ಪ ಗೋನಾಳ್, ಪದಾಧಿಕಾರಿಗಳಾದ ಸುಧೀರ್, ಹುಲುಗಪ್ಪ, ಮಲ್ಲಣ್ಣ, ಪ್ರಮೀಳಾಬಾಯಿ ಎಂ., ಚೈತ್ರ, ಅನಿತಾ, ಲಕ್ಷ್ಮಣ ಎಸ್. ಭಂಡಾರಿ, ಷಣ್ಮುಖ, ಗೌರಮ್ಮ, ರುದ್ರಮ್ಮ ಸೇರಿದಂತೆ ಹಲವಾರು ಶಿಕ್ಷಕರು, ನಗರ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು ಶುಭಾಶಯ ಕೋರಿದರು.


  ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top