ಮೇ 18 ರಂದು ಚಿತ್ತರಗಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ

Upayuktha
0

  

ಹುನುಗುಂದ: ತಾಲೂಕಿನ ಚಿತ್ತರಗಿ ಗ್ರಾಮದಲ್ಲಿ ಮಹಾಸಾಧ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ 604ನೇ ಜಯಂತೋತ್ಸವವನ್ನು ಮೇ 18 ರಂದು ಸೋಮವಾರ ಆಚರಣೆ ಗ್ರಾಮದಲ್ಲಿ ಜರುಗಿಸಲು ಹಿರಿಯರು ನಿರ್ಣಯಿಸಿದ್ದಾರೆ. ಪೂರ್ವಭಾವಿ ಸಭೆಯಲ್ಲಿ ಚಿತ್ತರಗಿ ಗ್ರಾಮದ ಗುರುಹಿರಿಯರು ಹಾಗೂ ಯುವಕರು ಪಾಲ್ಗೊಂಡಿದ್ದರು.


ನಿರ್ಮಾಣ ಹಂತದಲ್ಲಿರುವ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಚಿತ್ರ

ನಿರ್ಮಾಣ ಹಂತದಲ್ಲಿರುವ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಚಿತ್ರ

 

ಅಂದು ಬೆಳಿಗ್ಗೆ ಹೇಮರೆಡ್ಡಿ ಮಲ್ಲಮ್ಮನವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಕುಂಭ ಮತ್ತು ಮುತ್ತೈದರ ಆರತಿಯೊಂದಿಗೆ ಪ್ರಮುಖ ವಾದ್ಯ ಮೇಳಗಳೊಂದಿಗೆ ಹೇಮರೆಡ್ಡಿ ಮಲ್ಲಮ್ಮ ಭಾವಚಿತ್ರ ಮೆರವಣಿಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ರೆಡ್ಡಿ ಬಾಂಧವರು ಭಾಗವಹಿಸಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನ ಕೃಪೆಗೆ ಪಾತ್ರರಾಗಬೇಕೆಂದು ಪ್ರಕಟಣೆಯಲ್ಲಿ ಕೋರಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top