ಮಂಗಳೂರು: ಇಂದು ಜಿಲ್ಲಾ ಆದಿದ್ರಾವಿಡ ಸಮಾಜ ಸೇವಾ ಸಂಘದ ಸಮಾರಂಭ

Upayuktha
0

  


ಮಂಗಳೂರು: ಜಿಲ್ಲಾ ಆದಿದ್ರಾವಿಡ ಸಮಾಜ ಸೇವಾ ಸಂಘ.ರಿ ಇದರ ವಿಂಶತಿ ಮಹೋತ್ಸವ ಹಾಗೂ ಚೈತನ್ಯ ಸಹಕಾರಿ ಸಂಘ ಮಂಗಳೂರು ಇದರ ದಶಮಾನೋತ್ಸವ ಸಮಾರಂಭ ಸಂಭ್ರಮವು ಮೇ 10 ರಂದು ರವಿವಾರ ನಗರದ ಪುರಭವನದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.


ಮಧ್ಯಾಹ್ನ 12 ಗಂಟೆಗೆ ಸಮಾರೋಪ ಸಮಾರಂಭವು ಜಿಲ್ಲಾಧ್ಯಕ್ಷ ಸಂಜೀವ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಕರ್ನಾಟಕ ಸರ್ಕಾರದ ಸಭಾಧ್ಯಕ್ಷ ಯು ಟಿ ಖಾದರ್ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಆರ್ ಗುಂಡೂರಾವ್ , ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ  ಸಮಾರಂಭವನ್ನು ಉದ್ಘಾಟನೆ ಮಾಡಲಿದ್ದಾರೆ.


ಶ್ರೀ ಕ್ಷೇತ್ರ ಕಟೀಲು ಅನುವಂಶಿಕ ಅರ್ಚಕರು ಶ್ರೀಹರಿ ನಾರಾಯಣದಾಸ್ ಅಸ್ರಣ್ಣ ಆಶೀರ್ವಚನ ನೀಡಲಿದ್ದು, ಮುಖ್ಯ ಅತಿಥಿಯಾಗಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರು ಭಾಗೀರಥಿ ಮುರುಳ್ಯ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಶಾಸಕರು ಡಾ ವೈ ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರು , ಶಾಸಕರು ಐವನ್ ಡಿ'ಸೋಜಾ, ಸರ್ಕಾರಿ ಲೇಡಿ ಗೋಷನ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರು ಡಾ ದುರ್ಗಾ ಪ್ರಸಾದ್ ಎಂ ಆರ್, ವೆನ್ ಲಾಕ್ ಸರ್ಕಾರಿ ಆಸ್ಪತ್ರೆಯ ಮೂತ್ರ ರೋಗ ತಜ್ಞರು ಡಾ ಸದಾನಂದ ಪೂಜಾರಿ, ಕೊಡಗು ಆದಿ ದ್ರಾವಿಡ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷರು ಹೆಚ್ ಎಂ ಸೋಮಪ್ಪ, . ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ರಾಜೇಶ್ ಜಿ , ಮಂಗಳೂರು ಅಖಿಲ ಭಾರತ ತುಳು ವರ್ಲ್ಡ್ ಫೌಂಡೇಶನ್ ನಿರ್ದೇಶಕರು ಡಾ ರಾಜೇಶ್ ಆಳ್ವ, . ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರು ನವೀನ್ ಕುಮಾರ್ಮಂಗಳೂರು ಚೈತನ್ಯ ಸಹಕಾರಿ ಸಂಘದ ಅಧ್ಯಕ್ಷರು ರಘುನಾಥ ಅತ್ತಾವರ , ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷರು ಶಂಕರ್ ಬಿ ಹಾಸನ ಭಾಗವಹಿಸಲಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ನಡೆಯಲಿದ್ದು, ಸಮುದಾಯದ ಹಾಗೂ ಹವ್ಯಾಸಿ ತಂಡದವರಿಂದ ಸುಗಮ ಸಂಗೀತವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಭಾಗಿತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ

 

Post a Comment

0 Comments
Post a Comment (0)
To Top