ಪುತ್ತೂರು: ಏ. 27 ಮತ್ತು 28 ರಂದು ಆಳ್ವಾಸ್ ಕಾಲೇಜು ಮೂಡಬಿದಿರೆ ಇಲ್ಲಿ
ನಡೆದ ಮಂಗಳೂರು ವಿವಿ ಮಟ್ಟದ ಅಂತರ್ ಕಾಲೇಜು ಕ್ರೀಡಾಕೂಟದಲ್ಲಿ ಭಾಗವಹಿಸಿದ ಸಂತ ಫಿಲೋಮಿನಾ ಸ್ವಾಯತ್ತ
ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡುವುದರ ಮೂಲಕ ಬಹುಮಾನಕ್ಕೆ ಪಾತ್ರರಾಗಿದ್ದಾರೆ.
ಮಹಿಳೆಯರ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಾಲೇಜಿನ ತೃತೀಯ
ಬಿಎಸ್ಸಿ ವಿದ್ಯಾರ್ಥಿನಿ ಸ್ಪಂದನಾ ಕೆ ಅವರು 48 ಕೆಜಿ ವಿಭಾಗದಲ್ಲಿ ಪ್ರಥಮ, ದೃಶ್ಯ ಕೆ ವಿ 58 ಕೆಜಿ
ವಿಭಾಗದಲ್ಲಿ ದ್ವಿತೀಯ, ಸಿಂಚನ ಬಿ 77 ಕೆಜಿ ವಿಭಾಗದಲ್ಲಿ ತೃತೀಯ, ಚಮೀಶ ಯು 63 ಕೆಜಿ ವಿಭಾಗದಲ್ಲಿ
ತೃತೀಯ ಸ್ಥಾನವನ್ನು ಪಡೆದಿದ್ದಾರೆ.
ಪುರುಷರ ವಿಭಾಗದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ 71 ಕೆಜಿ
ವಿಭಾಗದಲ್ಲಿ ರಿತೇಶ್ ಕೆ ಐ ಪ್ರಥಮ, ತೃತೀಯ ಬಿಎ ವಿದ್ಯಾರ್ಥಿ ರಂಜಿತ್ ಕುಮಾರ್ 110 ಕೆಜಿ ವಿಭಾಗದಲ್ಲಿ
ದ್ವಿತೀಯ, ಅಭಿಜಿತ್ 79 ಕೆಜಿ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ರೆ|ಡಾ|
ಆ್ಯಂಟನಿ ಪ್ರಕಾಶ್ ಮೊಂತೆರೋ ಹಾಗೂ ಉಪನ್ಯಾಸಕರು ಹರ್ಷ ವ್ಯಕ್ತಪಡಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


