ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ 142ನೇ ಜನ್ಮ ದಿನಾಚರಣೆ

Upayuktha
0

ಮಂಗಳೂರು: ಮೈಸೂರು ಸಂಸ್ಥಾನದ ಸರ್ವತೋಮುಖ ಅಭಿವೃದ್ಧಿ ಮಾತ್ರವಲ್ಲದೆ ಫಲಾನುಭವಿಗಳಿಗೆ ಉತ್ತಮ ವೇದಿಕೆ ಕಲ್ಪಿಸುವ ಮತ್ತು ಉತ್ತಮ ಭವಿಷ್ಯ ರೂಪಿಸುವ ರೂವಾರಿಯಾಗಿ ಸಾಹಿತ್ಯ, ಕೈಗಾರಿಕೆ, ಶಿಕ್ಷಣ, ಕೃಷಿ ನೀರಾವರಿ, ಕೆ.ಆರ್.ಎಸ್ ಅಣೆಕಟ್ಟು ಯೋಜನೆಗಳು ಮೊದಲಾದ ಜನಪರ ಕೊಡುಗೆಗಳನ್ನು ಒದಗಿಸಿಕೊಟ್ಟ ನಾಲ್ವಡಿ ಕೃಷ್ಣ ರಾಜ ಒಡೆಯರ್ ಅವರ ಸಾಧನೆ ಮಹತ್ತರವಾದುದು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ನಾಗಣ್ಣ ಡಿ.ಎ ಹೇಳಿದರು.


ಮಂಗಳೂರಿನ ಶ್ರೀ ಗೋಕರ್ಣನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ನಾಲ್ವಡಿ ಕೃಷ್ಣರಾಜ ಒಡೆಯರ 142 ನೇ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಸಂಪನ್ಮೂಲ ಅತಿಥಿಗಳಾಗಿ ಮಾತನಾಡಿದರು.

 

ಪ್ರಶಿಕ್ಷಣಾರ್ಥಿಗಳಿಗೆ ನಾಲ್ವಡಿ ಕೃಷ್ಣ ರಾಜ ಒಡೆಯರ ಜನಪರ ಕಾಳಜಿ, ಅವರು ನೀಡಿದ ಹಲವಾರು ಕೊಡುಗೆಗಳು ಹಾಗೂ ಅವರ ಸಾಧನೆಯ ಬಗ್ಗೆ ವಿವರವಾದ ಉಪನ್ಯಾಸವನ್ನು ನೀಡಿದರು.


ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ನ್ಯಾಯವಾದಿಗಳು ಹಾಗೂ ಶ್ರೀ ಗೋಕರ್ಣನಾಥೇಶ್ವರ ಶಿಕ್ಷಣ ಸಂಸ್ಥೆಯ ಸಂಚಾಲಕ ವಸಂತ ಕಾರಂದೂರು ಇವರು ಪ್ರಶಿಕ್ಷಣಾರ್ಥಿಗಳಿಗೆ ಸಮಾಜಮುಖಿ ಕಾರ್ಯಕ್ರಮ ಮತ್ತು ಶ್ರೀ ಕೃಷ್ಣ ರಾಜ ಒಡೆಯರ ಚಿಂತನೆ ಮತ್ತು ಧ್ಯೇಯವನ್ನು ಅನುಸರಿಸುವಲ್ಲಿ ವಿದ್ಯಾರ್ಥಿಗಳ ಪಾತ್ರದ ಕುರಿತು ಮಾರ್ಗದರ್ಶನ ನೀಡಿದರು.


ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಂಜುನಾಥ ಎಸ್.ರೇವಣಕರ್ ಮತ್ತು ಶ್ರೀ ಗೋಕರ್ಣನಾಥೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ನಾಗೇಶ್ ಕರ್ಕೇರರವರು ದಿನದ ವಿಶೇಷತೆಯ ಕುರಿತು ಎಲ್ಲರಿಗೂ ಶುಭಾಶಯಗಳನ್ನು ಕೋರಿದರು.


ಶ್ರೀಗೋಕರ್ಣನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ. ಉದಯ ಕುಮಾರ್ ಬಿ ಪ್ರಾಸ್ತಾವಿಕವಾಗಿ ಮಾತನಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ  ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ. ಪಿ. ಶ್ರೀನಾಥ ಅವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಬದ್ಧತೆ ಮತ್ತು ಸಮಾಜದ ಬಗೆಗೆ ಇದ್ದ ಅವರ ಕಾಳಜಿ ಅನುಕರಣೀಯ ಎಂದರು.


ಕಾಲೇಜಿನ ಬೋಧಕ, ಬೋಧಕೇತರ ವೃಂದ ಹಾಗೂ ಪ್ರಶಿಕ್ಷಣಾರ್ಥಿಗಳು ಭಾಗಿಯಾಗಿದ್ದರು. ವಿದ್ಯಾರ್ಥಿನಿ  ಶೀತಲ ಸ್ವಾಗತಿಸಿದರು, ಶೃತಿ ಮತ್ತು ತಂಡ ನಾಡಗೀತೆ ಹಾಡಿದರು, ದೀಪ್ತಿ.ಎಂ ವಂದಿಸಿದರು. ಪೂರ್ವ ಕೆ ಕಾರ್ಯಕ್ರಮ ನಿರೂಪಿಸಿದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top