ಪ್ರಧಾನಿಗೆ ಶುಭ ಕೋರಿ ಉಡುಪಿ ಶ್ರೀಕೃಷ್ಣನಿಗೆ ವಿಶೇಷ ಪೂಜೆ

Upayuktha
0

ಉಡುಪಿ: ದಾಖಲೆಯ 4339‌ನೇ ದಿನವನ್ನು ಪೂರೈಸಿದ, ಸತತವಾಗಿ 12 ವರ್ಷಗಳು ದೀರ್ಘಾವಧಿ ಭಾರತದ ಪ್ರಧಾನ ಸೇವಕರಾಗಿ ಸೇವೆ ಸಲ್ಲಿಸಿದ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ದಾಮೋದರ ದಾಸ್ ಮೋದಿಯವರಿಗೆ ದೀರ್ಘಾಯುಷ್ಯ ಕೋರಿ ಹಾಗೂ 2047ರ ವಿಕಸಿತ ಭಾರತದ ಸಂಕಲ್ಪ ಸಾಧನೆಯ‌‌ ಯಶಸ್ಸನ್ನು ಕೋರಿ ‌ಇಂದು ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಪರ್ಯಾಯ ಶ್ರೀ ಶೀರೂರು ಶ್ರೀ ಕೃಷ್ಣ ಮಠದ ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀ ಪಾದರಿಂದ ಹಾಗೂ ಭಾರತೀಯ ಜನತಾಪಕ್ಷ ಉಡುಪಿ ಜಿಲ್ಲೆ ವತಿಯಿಂದ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಮಠದ ದಿವಾನರಾದ ಶ್ರೀ ಉದಯ ಕುಮಾರ್ ಸರಳತ್ತಾಯ, ಉಡುಪಿಯ ಜನಪ್ರಿಯ ಶಾಸಕ ಯಶ್ ಪಾಲ್ ಸುವರ್ಣ, ಜಿಲ್ಲಾಧ್ಯಕ್ಷ ಕುತ್ಯಾರು ನವೀನ್, ಪ್ರ.ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ದಿನಕರಶೆಟ್ಟಿ, ಜಿಲ್ಲಾ ವಕ್ತಾರ ಮಧುಕರ ಮುದ್ರಾಡಿ, ಸುಪ್ರಸಾದ್ ಶೆಟ್ಟಿ, ಮಹಿಳಾ ಮೋರ್ಚಾದ ಶ್ರೀಮತಿ ಸಂಧ್ಯಾ ರಮೇಶ್, ನಯನಾ ಗಣೇಶ್, ವೀಣಾ ಶೆಟ್ಟಿ, ಪ್ರಜ್ಞಾ ಶೆಟ್ಟಿ, ಪದ್ಮಾ ರತ್ನಾಕರ್, ಅಜಿತ್ ಪೈ, ಶಾಮ್ ಪ್ರಸಾದ್ ಕುಡ್ವ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top