ಪುತ್ತೂರು: ದೇವಾಲಯ ಸಂವರ್ಧನಾ ಸಮಿತಿ ಕರ್ನಾಟಕ ವತಿಯಿಂದ ಅರ್ಬಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಸರಸ್ವತಿ ವಂದನಾ ಕಾರ್ಯಕ್ರಮ ಹಮ್ಮಿಕ್ಕೊಳ್ಳಲಾಗಿತ್ತು. ಪುತ್ತೂರು ಜಿಲ್ಲಾ ಗ್ರಾಮಾಂತರ ಪ್ರಭಾರಿಗಳಾದ ರವೀಂದ್ರನಾಥ ರೈ ಬಳ್ಳಮಜಲು ಮತ್ತು ಮಧು ನರಿಯೂರು ಇದರಲ್ಲಿ ಭಾಗವಹಿಸಿದ್ದರು.
ಜಿಲ್ಲಾ ಸಹ ಸಂಯೋಜಕರಾದ ಕೃಷ್ಣ ಕುಮಾರ್ ಅತ್ರೆಜಾಲು ಕಾರ್ಯ ಕ್ರಮ ಸಂಯೋಜಿಸಿದ್ದರು, ದೇವಸ್ಥಾನದ ಆಡಳಿತ ಸಮಿತಿ ಹಾಗೂ ಊರ ಗಣ್ಯರು ಸಹಕರಿಸಿದ್ದರು.
ದೇವಳದ ಅರ್ಚಕರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿಕೊಟ್ಟರು. ಊರಿನ ವಿದ್ಯಾರ್ಥಿಗಳು ಮತ್ತು ಭಗವದ್ಭಕ್ತರಾದ ಬಂಧು ಭಗಿನಿಯರು ಹಾಗೂ ಮಕ್ಕಳು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


