ಸಂತ ಫಿಲೋಮಿನಾ ಕಾಲೇಜಿನಲ್ಲಿ 'ನಶಾ ಮುಕ್ತ ಭಾರತ ಅಭಿಯಾನ'

Upayuktha
0

 


ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ  ಸ್ನಾತಕೋತ್ತರ ಸಭಾಭವನದಲ್ಲಿ 'ನಶಾ ಮುಕ್ತ ಭಾರತ ಅಭಿಯಾನ' ಕಾರ್ಯಕ್ರಮವನ್ನು ಆಯೋಜಸಲಾಯಿತು. 


ಕಾರ್ಯಕ್ರಮದ  ಅಧ್ಯಕ್ಷತೆ ವಹಿಸಿದ್ದ  ಕಾಲೇಜಿನ ಪ್ರಾಂಶುಪಾಲ  ವಂ| ಡಾ| ಆ್ಯಂಟನಿ ಪ್ರಕಾಶ್‌ ಮೊಂತೇರೊ, ಯುವಜನತೆ ಮಾದಕ ವಸ್ತುಗಳ ವ್ಯಸನದಿಂದ ದೂರವಿದ್ದು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು. ದೇಶದ ಭವಿಷ್ಯ ಯುವಜನತೆಯ ಕೈಯಲ್ಲಿದ್ದು, ಆರೋಗ್ಯಕರ ಜೀವನಶೈಲಿ, ಉತ್ತಮ ಮೌಲ್ಯಗಳು ಹಾಗೂ ಜವಾಬ್ದಾರಿಯುತ ನಡವಳಿಕೆಯಿಂದ ಸಮಾಜಕ್ಕೆ ಮಾದರಿಯಾಗಬೇಕೆಂದು ಅವರು ತಿಳಿಸಿ, ಬಳಿಕ ಅವರು 'ನಶಾ ಮುಕ್ತ ಭಾರತ' ಪ್ರತಿಜ್ಞಾವಿಧಿಯನ್ನು ಬೋಧಿಸಿದರು. 


ಪ್ರಥಮ ಎಂಸಿಎ ತರಗತಿಯ ಜೆವಿಟಾ ಮತ್ತು ಬಳಗದವರು ಪ್ರಾರ್ಥಿಸಿ, ಕಾಲೇಜಿನ ಡ್ಯಾಪ್ಸ್‌ ಘಟಗದ ಸಂಯೋಜಕರೂ ಐಕ್ಯುಎಸಿಯ ಸಂಯೋಜಕರೂ ಆದ ಡಾ| ಎಡ್ವಿನ್‌ ಎಸ್‌ ಡಿ ಸೋಜರ ಸ್ವಾಗತಿಸಿ  ನಶಾಮುಕ್ತ ಭಾರತ ಅಭಿಯಾನದ ಕುರಿತು ವಿವರಣೆ ನೀಡಿದರು. ಕಾಲೇಜಿನ ಪರೀಕ್ಷಾಂಗ ಕುಲಸಚಿವರಾದ ಡಾ| ವಿನಯಚಂದ್ರರವರು ವಂದಿಸಿ, ಎಂಸಿಎ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಅಕ್ಷತಾ ಬಿ. ನಿರೂಪಿಸಿದರು. 


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top