ಧರ್ಮಸ್ಥಳದಲ್ಲಿ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಸುದ್ದಿಗೋಷ್ಠಿ

Upayuktha
0

 


ಉಜಿರೆ: ರಾಜ್ಯದಲ್ಲಿ ಭೀಕರ ಬರಗಾಲದ ಸನ್ನಿವೇಶವಿದ್ದು ಇದೆಲ್ಲ ನಿವಾರಣೆಯಾಗಿ ಒಳ್ಳೆಯ ಮಳೆ-ಬೆಳೆ ಆಗಲಿ. ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗಲಿ. ಜನರ ಬದುಕು ಹಸನಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದರು.

ಅವರು ಧರ್ಮಸ್ಥಳದಲ್ಲಿ ದೇವರ ದರ್ಶನ ಮಾಡಿ, ವಿಶೇಷ ಪೂಜೆಯೊಂದಿಗೆ ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಬೀಡಿನಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು.

ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕಳೆದ ನಾಲ್ಕು ದಿನಗಳಲ್ಲಿ ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮಂಗಳೂರು ಮೂಲಕ ನೇರವಾಗಿ ಧರ್ಮಸ್ಥಳಕ್ಕೆ ಬಂದಿದ್ದೇನೆ. ಹಿಂದೂಗಳ ರಕ್ಷಣೆ ಮಾಡುವ ಬಿ.ಜೆ.ಪಿ. ನೇತೃತ್ವದ ಒಳ್ಳೆಯ ಸರ್ಕಾರ ಆಡಳಿತಕ್ಕೆ ಬರಲಿ ಎಂದು ಹಾಗೂ ರಾಜ್ಯದ ಸರ್ವತೋಮುಖ ಪ್ರಗತಿಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇವೆ ಎಂದರು.

ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಇಬ್ಬರು ಅಭ್ಯರ್ಥಿಗಳು ಗೆಲುವು ಪಡೆದಿದ್ದಾರೆ. ಚುನಾವಣೆಯಲ್ಲಿ ಅಡ್ಡಮತದಾನದ ಬಗ್ಯೆ ಲಕ್ಷಾಂತರ ಮಂದಿ ಪಕ್ಷದ ಕಾರ್ಯಕರ್ತರು ನೋವನ್ನು ಅನುಭವಿಸಿದ್ದಾರೆ. ಇದು ಬೇರೆ ಬೇರೆ ಚರ್ಚೆಗಳಿಗೆ ಗ್ರಾಸವಾಗಿತ್ತು. ತಾನು ಧರ್ಮಸ್ಥಳದ ಅಭಿಮಾನಿ ಭಕ್ತನಾಗಿದ್ದು, ಯಾವುದೇ ನೋವಾದಾಗ  ಇಲ್ಲಿಗೆ ಬಂದು ಪರಿಹರಿಸಿಕೊಳ್ಳುತ್ತೇನೆ. ಧರ್ಮಸ್ಥಳದಲ್ಲಿ ಶಾಸಕಾಂಗ ಸಭೆ ನಡೆಯಬೇಕು. ಸತ್ಯಾಸತ್ಯತೆ ಹೊರಬರಬೇಕು ಎಂದು ಹೇಳಿದ್ದೆ, ಹಿರಿಯರ ಸಲಹೆಯಂತೆ ದೆಹಲಿಗೆ ಹೋಗಿ ವರಿಷ್ಠರ ಜೊತೆ ಮಾತನಾಡಿದ್ದೇನೆ. ಅವರ ಸಲಹೆಯಂತೆ ನಿರ್ಧಾರ ಕೈಬಿಟ್ಟು ದೇವರ ಭಕ್ತನಾಗಿ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದರು. 


ಸಂಸದರಾದ ಬ್ರಿಜೇಶ್ ಚೌಟ, ಬಿ.ಜೆ.ಪಿ. ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ, ಶಾಸಕರುಗಳಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ಗುರುರಾಜ ಗಂಟಿಹೊಳೆ, ಯಶಪಾಲ್ ಸುವರ್ಣ, ರಾಜೇಶ್ ನಾಯಕ್, ಸುರೇಶ್ ಶೆಟ್ಟಿ ಗುರ್ಮೆ, ಕಿರಣ್ ಕೊಡ್ಗಿ, ಕೆ. ಪ್ರತಾಪಸಿಂಹನಾಯಕ್, ಕಿಶೋರ್ ಕುಮಾರ್ ಮತ್ತು ಪಕ್ಷದ ಕಾರ್ಯಕರ್ತರಾದ ಜಯಂತ್ ಕೋಟ್ಯಾನ್ ಹಾಗೂ ಶ್ರೀನಿವಾಸ ರಾವ್ ಧರ್ಮಸ್ಥಳ ಉಪಸ್ಥಿತರಿದ್ದರು. ಶಾಸಕ ಹರೀಶ್ ಪೂಂಜ ಸ್ವಾಗತಿಸಿದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top