ಬ್ಯಾಡ್ಮಿಂಟನ್ ಪದಕ ವಿಜೇತ ಆಯುಷ್ ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ

Upayuktha
0

ಉಜಿರೆ: ಭಾರತದ ಭರವಸೆಯ ಬ್ಯಾಡ್ಮಿಂಟನ್ ತಾರೆ, ಥಾಮಸ್ ಕಪ್ ವಿಜೇತ ಹಾಗೂ 2026ರ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಬೆಳ್ಳಿ ಪದಕ ವಿಜೇತ ಆಯುಷ್ ಶೆಟ್ಟಿ ಅವರು ಸಕುಟುಂಬಿಕರಾಗಿ ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದರು.


ಬಳಿಕ ಅವರು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ದೇಶದ ಕ್ರೀಡಾ ಕ್ಷೇತ್ರದಲ್ಲಿ ಕರ್ನಾಟಕದ ಕೀರ್ತಿಯನ್ನು ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿಸುತ್ತಿರುವ ಆಯುಷ್ ಶೆಟ್ಟಿ ಅವರ ಸಾಧನೆಯನ್ನು ಶ್ಲಾಘಿಸಿದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಮುಂದಿನ ದಿನಗಳಲ್ಲಿ ಇನ್ನಷ್ಟು ಯಶಸ್ಸು ಸಾಧಿಸಿ ದೇಶಕ್ಕೆ ಕೀರ್ತಿ ತರಲೆಂದು ಶುಭ ಹಾರೈಸಿದರು.
ಪೂಜ್ಯ ಹೆಗ್ಗಡೆಯವರು ಆಯುಷ್ ಶೆಟ್ಟಿ ಅವರ ಸಾಧನೆಗೆ ಅಭಿನಂದಿಸಿ ಮುಂದೆ ಇನ್ನೂ ಹೆಚ್ಚಿನ ಯಶಸ್ಸು ಪಡೆಯುವಂತಾಗಲೆಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಹಾಗೂ ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಕ ಸಂತೋಷ್ ಉಪಸ್ಥಿತರಿದ್ದರು.


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top