ಕನ್ಯಾನ: ಇಲ್ಲಿನ ಬಂಡಿತ್ತಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27 ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಅದ್ದೂರಿಯಾಗಿ ನಡೆಯಿತು. ಶಾಲೆಯ ಹಿರಿಯ ವಿದ್ಯಾರ್ಥಿ ಶ್ರೀನಿವಾಸ ಭಟ್ ಬನಾರಿ ಒಂದನೇ ತರಗತಿಗೆ ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಅಕ್ಷತೆಯ ಮೂಲಕ ಅಕ್ಷರಾಭ್ಯಾಸ ಮಾಡಿಸುವ ಮೂಲಕ ಶಾಲಾ ಪ್ರಾರಂಭೋತ್ಸವವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘ ಶಾಲಾ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಪ್ರಕಟಿಸಿದೆ. 206 ಸದಸ್ಯರಿರುವ ಹಳೆ ವಿದ್ಯಾರ್ಥಿಗಳ ಸಂಘ ಶಾಲೆಗೆ ಈ ವರ್ಷ ಹಲವು ಕೊಡುಗೆ ನೀಡಿದೆ. 1 ರಿಂದ 6ನೇ ತರಗತಿಗೆ ಸೇರ್ಪಡೆಯಾಗುವ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ತಲಾ 1000 ರೂಪಾಯಿ ಠೇವಣಿ, ಒಂದು ವರ್ಷಕ್ಕೆ ಬೇಕಾಗುವ ಎಲ್ಲಾ ನೋಟ್ ಪುಸ್ತಕಗಳು, ಪ್ರೇಕ್ಷಣೀಯ ಸ್ಥಳಗಳಿಗೆ ಒಂದು ದಿನದ ಪ್ರವಾಸದಲ್ಲಿ ಮಗುವಿನೊಂದಿಗೆ ತಾಯಿಗೂ ಉಚಿತ ಪ್ರವಾಸವನ್ನು ಘೋಷಿಸಿದ ಈ ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಕೃಷ್ಣ ಕುಮಾರ್ ಕಮ್ಮಜೆ, ಅಧ್ಯಕ್ಷ ಇಸ್ಮಾಯಿಲ್ ಕುಕ್ಕಾಜೆ, ಎಸ್ ಡಿ ಎಂ ಸಿ ಅಧ್ಯಕ್ಷೆ ಕಮರುನ್ನಿಸ, ಉಪಾಧ್ಯಕ್ಷೆ ಭುವನೇಶ್ವರಿ ವಾಸುದೇವ, ಕನ್ಯಾನ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಬುಶ್ರಿಯ, ಅಂಗನವಾಡಿ ಕಾರ್ಯಕರ್ತೆ ಶಾರದಾ, ರಾಧಾಕೃಷ್ಣ ಕನ್ಯಾನ ಉಪಸ್ಥಿತರಿದ್ದರು.
ಕಳೆದ ಎರಡು ವರ್ಷಗಳ ಹಿಂದೆ ಏಳು ವಿದ್ಯಾರ್ಥಿಗಳಿದ್ದ ಈ ಶಾಲೆ ಮುಚ್ಚಲ್ಪಡುವ ಸ್ಥಿತಿಗೆ ತಲುಪಿದಾಗ ಇಲ್ಲಿಗೆ ಪ್ರಭಾರ ಮುಖ್ಯ ಶಿಕ್ಷಕಿಯಾಗಿ ಬಂದ ಸಕೀನ ಎನ್ ಇವರ ಪರಿಶ್ರಮದಿಂದ ಹಳೆ ವಿದ್ಯಾರ್ಥಿ ಸಂಘ ರಚಿಸಿ, ಎಸ್‌ಡಿಎಂಸಿ ಯನ್ನು ಬಲಪಡಿಸಿ ಇದೀಗ 2026-2027 ರ ಶೈಕ್ಷಣಿಕ ವರ್ಷದಲ್ಲಿ ಹತ್ತು ಮಕ್ಕಳ ಸೇರ್ಪಡೆಯೊಂದಿಗೆ ಶಾಲೆ ಪ್ರಗತಿ ಸಾಧಿಸಿದೆ.
ಶಿಕ್ಷಕಿ ವನಿತಾ ಕನ್ಯಾನ ಕಾರ್ಯಕ್ರಮ ನಿರೂಪಿಸಿ, ಪ್ರಭಾರ ಮುಖ್ಯ ಶಿಕ್ಷಕಿ ಸಕೀನ ಎನ್ ಸ್ವಾಗತಿಸಿ, ವಂದಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


