ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಯೋಗ ದಿನಾಚರಣೆ

Upayuktha
0


ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯೋಗ ತರಬೇತಿಗಾರ ಪ್ರೊ.ಕೃಷ್ಣಾನಂದ ಮಾತನಾಡಿ ಯೋಗವು ಕೇವಲ ವ್ಯಾಯಾಮವಲ್ಲ. ಅದು ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಆರೋಗ್ಯವನ್ನು ವೃದ್ಧಿಸುವ ಜೀವನ ಪದ್ಧತಿ ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ಅವರು ವಿವಿಧ ಆಸನಗಳು, ಪ್ರಾಣಾಯಾಮ ಹಾಗೂ ಧ್ಯಾನದ ವಿಧಾನಗಳನ್ನು ಪ್ರದರ್ಶಿಸಿ ಯೋಗದ ಮಹತ್ವ, ಆರೋಗ್ಯಕರ ಜೀವನಶೈಲಿಯಲ್ಲಿ ಯೋಗದ ಪಾತ್ರ ಹಾಗೂ ಮಾನಸಿಕ ನೆಮ್ಮದಿಗೆ ಯೋಗದ ಅಗತ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು. 

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಯುವಜನತೆ ಪ್ರತಿದಿನ ಯೋಗಾಭ್ಯಾಸವನ್ನು ರೂಢಿಸಿಕೊಳ್ಳುವ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಕರೆನೀಡಿದರು. 

ವೇದಿಕೆಯಲ್ಲಿ ಬಪ್ಪಳಿಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲ ಗಣೇಶ ಪ್ರಸಾದ್  ಡಿ.ಎಸ್, ಉಪಪ್ರಾಂಶುಪಾಲ ಪ್ರದೀಪ್ ಕೆ.ವೈ. ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಧನ್ಯಶ್ರೀ ಹಾಗೂ ತಂಡದವರು ಪ್ರಾರ್ಥಿಸಿದರು. ವಿದ್ಯಾರ್ಥಿನಿ ಶ್ರೀಧಾತ್ರಿ ಕಾರ್ಯಕ್ರಮ ನಿರೂಪಿಸಿದರು. ಅತಿಥಿ ಪರಿಚಯವನ್ನು ರಕ್ಷಾ ಅವರು ನಡೆಸಿಕೊಟ್ಟರು. ವಿದ್ಯಾರ್ಥಿನಿ ಲಾಸ್ಯ ವಂದಿಸಿದರು.  



Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top