ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ "ವಿಕಸಿತ ಭಾರತ- ವಿಶ್ವಾಸ, ವಿಕಾಸ ಮತ್ತು ಜನಕಲ್ಯಾಣಕ್ಕೆ 12 ವರ್ಷಗಳು" ಪೂರೈಸಿದ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಬೃಹತ್ "ಸಾಧನಾ ಪ್ರದರ್ಶನಿ ಹಾಗೂ ಜನಕಲ್ಯಾಣ ಶಿಬಿರ"ವನ್ನು ಜೂನ್ 25 ರಂದು ಮಂಗಳೂರಿನಲ್ಲಿ ಆಯೋಜಿಸಲಾಗಿದೆ.
ಈ ವಿಶೇಷ ಪ್ರದರ್ಶನ ಮತ್ತು ಶಿಬಿರವು 25 ಜೂನ್ 2026, ಗುರುವಾರದಂದು ಮಂಗಳೂರಿನ ಬಿಜ್ಜೈನಲ್ಲಿರುವ KSRTC ಬಸ್ ನಿಲ್ದಾಣದಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 10:00 ಗಂಟೆಗೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ.
ಈ ಪ್ರದರ್ಶನಿ ಹಾಗೂ ಜನಕಲ್ಯಾಣ ಶಿಬಿರವು ಸಾರ್ವಜನಿಕರ ಅನುಕೂಲಕ್ಕಾಗಿ ಬೆಳಗ್ಗೆ 10:00 ಗಂಟೆಯಿಂದ ಸಂಜೆ 6:00 ಗಂಟೆಯ ತನಕ ತೆರೆದಿರಲಿದೆ. ಕಳೆದ 12 ವರ್ಷಗಳಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಿಧ ಜನಪರ ಯೋಜನೆಗಳು, ದೇಶದ ಸರ್ವತೋಮುಖ ಅಭಿವೃದ್ಧಿಯ ಮೈಲಿಗಲ್ಲುಗಳ ಮಾಹಿತಿ ಹಾಗೂ ಸಾರ್ವಜನಿಕರಿಗೆ ನೇರ ಪ್ರಯೋಜನ ಸಿಗುವಂತಹ ಶಿಬಿರಗಳು ಒಂದೇ ಸೂರಿನಡಿ ಲಭ್ಯವಿರಲಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


