ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸಾವಿರಾರು ರಕ್ತದಾನಿಗಳಿದ್ದಾರೆ.
ಇಂದು ಅವರಿಂದಾಗಿ ಜಿಲ್ಲೆಯಲ್ಲಿ ವೈದ್ಯಕೀಯ ಕ್ಷೇತ್ರವು ಮಹತ್ವವನ್ನು ಪಡೆದಿದೆ. ಜಿಲ್ಲೆಯು ರಾಜ್ಯದಲ್ಲೇ
ರಕ್ತದಾನಿಗಳ ಜಿಲ್ಲೆ ಎಂದು ಗುರುತಿಸಲ್ಪಟ್ಟು ಮಾದರಿಯಾಗಿದೆ ಎಂದು ಕರ್ನಾಟಕ ರಾಜ್ಯ ರೆಡ್‌ಕ್ರಾಸ್
ಸಂಸ್ಥೆಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಹೇಳಿದರು.
ಭಾರತೀಯ
ರೆಡ್ಕ್ರಾಸ್
ಸಂಸ್ಥೆ ಉಡುಪಿ ಜಿಲ್ಲಾ ಶಾಖೆ, ಭಾರತೀಯ ರೆಡ್ಕ್ರಾಸ್
ಸಂಸ್ಥೆ ರಕ್ತನಿಧಿ ಕೇಂದ್ರ ಕುಂದಾಪುರ ಮತ್ತು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಉಡುಪಿ ಆಶ್ರಯದಲ್ಲಿ ನಡೆದ ವಿಶ್ವ ರಕ್ತದಾನಿಗಳ
ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತಾನಾಡಿದರು.
ಕುಂದಾಪುರ ರೆಡ್ಕ್ರಾಸ್
ಸಭಾಪತಿ ಜಯಕರ ಶೆಟ್ಟಿ ಮಾತನಾಡಿ,
ಜಿಲ್ಲೆಯಲ್ಲಿ ರಕ್ತದ ತೀವ್ರ ಕೊರತೆಯಿದ್ದು ರಕ್ತದಾನದ ಬಗ್ಗೆ ಇನ್ನಷ್ಟು ಅರಿವು ಮೂಡಿಸುವ ಅಗತ್ಯವಿದೆ ಎಂದರು.
ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ರತ್ನ ಸುವರ್ಣ ರಕ್ತದಾನದ
ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಹಲವು ಬಾರಿ ರಕ್ತದಾನ
ಮಾಡಿ ಅಮೂಲ್ಯ ಜೀವ ಉಳಿಸಿದ ರಕ್ತದಾನಿಗಳಾದ
ಸುಕನ್ಯಾ ಎಂ. ಕಳಸ, ಅಕ್ಷತ್
ನಾಯಕ್, ವಿಶ್ವನಾಥ ನಾಯಕ್, ರಘುರಾಮ್, ಶಿವಕುಮಾರ್ ಶೆಟ್ಟಿಗಾರ್ ಮತ್ತು ರಮೇಶ್ ಕರ್ಕೇರರವರನ್ನು ಜಿಲ್ಲಾ ರೆಡ್ಕ್ರಾಸ್
ಪರವಾಗಿ ಸನ್ಮಾನಿಸಲಾಯಿತು.
ಸುಕನ್ಯ
ಎಂ. ಕಳಸ ಮತ್ತು ಶಿವಕುಮಾರ್
ಶೆಟ್ಟಿಗಾರ್ ಸನ್ಮಾನಿತರ ಪರವಾಗಿ ರಕ್ತದಾನದ ಬಗ್ಗೆ ತಮ್ಮ ಅನುಭವಗಳನ್ನು ಹಂಚಿಕೊಂಡರು.
ಜಿಲ್ಲಾ
ರೆಡ್ಕ್ರಾಸ್
ಉಪಸಭಾಪತಿ ಡಾ. ಅಶೋಕ್ ಕುಮಾರ್
ವೈ.ಜಿ, ಆಡಳಿತ ಮಂಡಳಿಯ
ಸದಸ್ಯ ಟಿ. ಚಂದ್ರಶೇಖರ್ ಉಪಸ್ಥಿತರಿದ್ದರು.
ರೆಡ್ಕ್ರಾಸ್
ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು
ಸ್ವಾಗತಿಸಿ, ರೆಡ್ಕ್ರಾಸ್
ಸದಸ್ಯ ಪ್ರೊ. ದಯಾನಂದ ಡಿ. ನಿರೂಪಿಸಿ, ರೆಡ್ಕ್ರಾಸ್
ಖಚಾಂಚಿ ರಮಾದೇವಿ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


