ಸಿ.ಎ. ಫೈನಲ್ ಪರೀಕ್ಷೆ: ಪಾಣಾಜೆಯ ಸುಹಾಸ ಕೆ. ಉತ್ತೀರ್ಣ

Upayuktha
0


ಪುತ್ತೂರು: ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ (ICAI) ನಡೆಸಿದ ಮೇ 2026ರ ಸಿ.ಎ. ಫೈನಲ್ ಪರೀಕ್ಷೆಯಲ್ಲಿ ಪುತ್ತೂರು ತಾಲೂಕಿನ ಪಾಣಾಜೆ ಗ್ರಾಮದ ಕೊಂದಲಕಾನ ನಿವಾಸಿ ಸುಹಾಸ ಕೆ. ಅವರು ಯಶಸ್ವಿಯಾಗಿ ಉತ್ತೀರ್ಣರಾಗಿದ್ದು, ಚಾರ್ಟರ್ಡ್ ಅಕೌಂಟೆಂಟ್ (CA) ಆಗಿದ್ದಾರೆ. ಮೇ 2026ರಲ್ಲಿ ನಡೆದ ಸಿ.ಎ. ಫೈನಲ್ ಪರೀಕ್ಷೆಯ ಫಲಿತಾಂಶವನ್ನು ICAI ಜೂನ್ 18, 2026ರಂದು ಪ್ರಕಟಿಸಿತ್ತು.  


ಸುಹಾಸ ಅವರು ಕೊಂದಲಕಾನ ಮಹಾಲಿಂಗ ಭಟ್ ಹಾಗೂ ಶೈಲಜಾ ದಂಪತಿಯ ಪುತ್ರರಾಗಿದ್ದಾರೆ. ಮಂಗಳೂರಿನ ತ್ರಿಶಾ ಕಾಲೇಜಿನಲ್ಲಿ ಬಿ.ಕಾಂ. ಹಾಗೂ ಸಿ.ಎ. ಇಂಟರ್‌ಮೀಡಿಯೇಟ್ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ.


ಬೆಂಗಳೂರಿನ Vishnu Daya & Co. ಸಂಸ್ಥೆಯಲ್ಲಿ ಆರ್ಟಿಕಲ್‌ಶಿಪ್ ತರಬೇತಿಯನ್ನು ಪೂರ್ಣಗೊಳಿಸಿದ್ದು, ಇದೀಗ ಸಿ.ಎ. ಫೈನಲ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಕುಟುಂಬ, ಊರು ಹಾಗೂ ಶಿಕ್ಷಣ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.


ಸುಹಾಸ ಅವರ ಈ ಸಾಧನೆಗೆ ಕುಟುಂಬದವರು, ಬಂಧು-ಬಳಗ, ಸ್ನೇಹಿತರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top