ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ ಆರಂಭ

Upayuktha
0

 


ಉಜಿರೆ: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳ ಸಿಇ‌ಟಿ - 2026  ಆಯ್ಕೆ ದಾಖಲಿಸುವ ಪ್ರಕ್ರಿಯೆ  ಆನ್ಲೈನ್ ಆಗಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸಹಾಯ ಕೇಂದ್ರವನ್ನು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಮಹಾವಿದ್ಯಾಲಯದ ವತಿಯಿಂದ ಜೂನ್ 21 ರಿಂದ ಆರಂಭಿಸಲಾಗುತ್ತಿದೆ. ರಾಜ್ಯಾದ್ಯಂತ ಇರುವ ಅಭ್ಯರ್ಥಿಗಳು ಇದರ ಉಪಯೋಗ ಪಡೆದುಕೊಳ್ಳಬಹುದು ಎಂದು  ಕಾಲೇಜಿನ ಪ್ರಾಚಾರ್ಯ ರಾದ ಡಾ. ಅಶೋಕ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಆಯ್ಕೆಯನ್ನು ನಮೂದಿಸಲು ಬರುವಾಗ ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ಡ್ ಮೊಬೈಲ್, ಸಿ.ಇ.ಟಿ ಸೀಕ್ರೆಟ್ ಕೀ, ವೆರಿಫಿಕೇಶನ್ ಸ್ಲಿಪ್,ಪಾಸ್ ವರ್ಡ ಅನ್ನು  ಜೊತೆಗೆ ತರಲು ಕೋರಲಾಗಿದೆ. ಸಂಪರ್ಕ ಸಮಯ 10AM-4PM   ಹೆಚ್ಚಿನ ಮಾಹಿತಿಗಾಗಿ ಪ್ರೊ. ರಾಧಾಕೃಷ್ಣ( 9611037015) ಅವರನ್ನು ಸಂಪರ್ಕಿಸಬಹುದಾಗಿದೆ.


2026-27ನೇ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆ ಆರಂಭಗೊಂಡಿದ್ದು, ಆಡಳಿತ ಮಂಡಳಿ ಕೋಟಾದಲ್ಲಿ ಕೆಳಕಂಡ ವಿಭಾಗಗಳಲ್ಲಿ ಸೀಟುಗಳು ಲಭ್ಯವಿವೆ:


* ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ (CSE)

* ಇನ್ಫರ್ಮೇಶನ್ ಸೈನ್ಸ್ ಮತ್ತು ಇಂಜಿನಿಯರಿಂಗ್ (ISE)

* ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಡೇಟಾ ಸೈನ್ಸ್ (AI & DS)

* ಸಿವಿಲ್ ಇಂಜಿನಿಯರಿಂಗ್

* ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ (ECE)

* ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ (EEE)

 

ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ 8762127991,  08256236961/237721 ಸಂಖ್ಯೆಯನ್ನು ಸಂಪರ್ಕಿಸಬಹುದು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top