ಮಂಗಳೂರು: ಕೆನರಾ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಹಾಗೂ ತಂದೆಯಂದಿರ ದಿನಾಚರಣೆಯನ್ನು ಆಚರಿಸಲಾಯಿತು. ಯೋಗ ತರಬೇತುದಾರರಾದ ಶ್ರುತಿ ಯೋಗದ ಮಹತ್ವವನ್ನು ತಿಳಿಸಿ, ಪೋಷಕರು ಹಾಗೂ ಮಕ್ಕಳೊಂದಿಗೆ ವಿವಿಧ ಯೋಗಾಸನಗಳನ್ನು ಅಭ್ಯಾಸ ಮಾಡಿಸಿದರು.
ಶಾಲೆಯ ಮುಖ್ಯೋಪಾಧ್ಯಾಯಿನಿ ತೃಪ್ತಿ ರೈ ಉಪಸ್ಥಿತರಿದ್ದ ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮವನ್ನು ಮಕ್ಕಳೇ ನಿರ್ವಹಿಸಿದ್ದು ವಿಶೇಷ ಆಕರ್ಷಣೆಯಾಗಿತ್ತು. ಈ ಸಂದರ್ಭದಲ್ಲಿ ಶಾಲೆಯ ಶೈಕ್ಷಣಿಕ ಮುಖ್ಯಸ್ಥರಾದ ಶ್ರೀಮತಿ ಉಜ್ವಲ್ ಮಲ್ಯ ಅವರು ಉಪಸ್ಥಿತರಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಪ್ರೋತ್ಸಾಹಿಸಿದರು.
ತಂದೆಯಂದಿರ ದಿನಾಚರಣೆಯ ಅಂಗವಾಗಿ ಮಕ್ಕಳು ತಮ್ಮ ತಂದೆಯ ಕುರಿತು ಅನಿಸಿಕೆಗಳನ್ನು ಹಂಚಿಕೊಂಡು, ಅವರಿಗೆ ಸಮರ್ಪಿತವಾದ ಹಾಡುಗಳನ್ನು ಹಾಡಿದರು. ಭಾವಪೂರ್ಣ ಕ್ಷಣಗಳಿಗೆ ಸಾಕ್ಷಿಯಾದ ಈ ಕಾರ್ಯಕ್ರಮದಲ್ಲಿ ಪೋಷಕರೊಂದಿಗೆ ವಿವಿಧ ಆಟಗಳನ್ನು ಆಯೋಜಿಸಲಾಗಿತ್ತು. ವಿಶೇಷವಾಗಿ, ತಂದೆಯಂದಿರು ತಮ್ಮ ಮಕ್ಕಳೊಂದಿಗೆ ಸಂತಸದ ಕ್ಷಣಗಳನ್ನು ಕಳೆಯುತ್ತಾ, ದೈನಂದಿನ ಒತ್ತಡಗಳಿಂದ ದೂರವಾಗಿ ನೆಮ್ಮದಿಯ ಅನುಭವ ಪಡೆದರು. ಈ ದಿನಾಚರಣೆಯು ಪೋಷಕರಿಗೆ ಮಕ್ಕಳೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯುವ ಅವಕಾಶವನ್ನು ಒದಗಿಸಿ, ಕುಟುಂಬ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಿತು.
“ಆರೋಗ್ಯಕ್ಕೆ ಯೋಗ, ಕುಟುಂಬಕ್ಕೆ ಪ್ರೀತಿ – ಸಂತಸದ ಬದುಕಿಗೆ ಇವೆರಡೂ ಅಗತ್ಯ” ಎಂಬ ಸಂದೇಶದೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


