ಕ್ರೀಡಾ ಸಾಧನೆಗಾಗಿ ನಗದು ಪುರಸ್ಕಾರ

Upayuktha
0

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಕ್ರೀಡಾ ಸ್ಪರ್ಧೆಗಳಲ್ಲ್ಲಿ ಗಣನೀಯ ಸಾಧನೆಯನ್ನು ಮಾಡಿದ್ದಕ್ಕಾಗಿ 125000 ರೂಗಳ ನಗದು ಪುರಸ್ಕಾರವನ್ನು ಗಳಿಸಿಕೊಂಡಿದೆ. 


2024-25ನೇ ಶೈಕ್ಷಣಿಕ ಸಾಲಿನಲ್ಲಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವಲಯ, ಅಂತರ್ವಲಯ, ವಿಶ್ವವಿದ್ಯಾನಿಲಯ ಮತ್ತು ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿತ್ತು. ಕಾಲೇಜಿನ ಈ ಸಾಧನೆಗಾಗಿ ವಿಶ್ವವಿದ್ಯಾನಿಲಯದ ಕ್ರೀಡಾಭಿವೃದ್ದಿ ಯೋಜನೆಯಲ್ಲಿ ಈ ಪುರಸ್ಕಾರವನ್ನು ನೀಡಲಾಗಿದೆ. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದ ಸಾಧಕರ ದಿನಾಚರಣೆಯಲ್ಲಿ ಉಪಕುಲಪತಿಗಳಾದ ಸನ್ಮಾನ್ಯ ಡಾ.ವಿದ್ಯಾಶಂಕರ್.ಎಸ್ ಮತ್ತು ಇತರ ಅಧಿಕಾರಿಗಳು ಪ್ರಶಸ್ತಿ ಪ್ರದಾನ ಮಾಡಿದರು. ಕಾಲೇಜಿನ ಪರವಾಗಿ ಎಲೆಕ್ಟಾçನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗ ಮುಖ್ಯಸ್ಥ ಡಾ.ಶ್ರೀಕಾಂತ್ ರಾವ್.ಎಸ್.ಕೆ ಮತ್ತು ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ.ಬಾಲಚಂದ್ರ ಗೌಡ ಅವರು ಸಮಾರಂಭದಲ್ಲಿ ಪಾಲ್ಗೊಂಡರು.


ಈ ಸಾಧನೆಗೆ ಶ್ರಮವಹಿಸಿದ ಎಲ್ಲರನ್ನೂ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿಯವರು ಅಭಿನಂದಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top