ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್: ನೊಣವಿನ ಕೆರೆ ಅಜ್ಜಯ್ಯನ ಹೆಸರಲ್ಲಿ ಪ್ರಮಾಣ ವಚನ

Upayuktha
0


ಬೆಂಗಳೂರು: ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು.

ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಡಿ.ಕೆ. ಶಿವಕುಮಾರ್ ಅವರು ನೊಣವಿನ ಕೆರೆ ಅಜ್ಜಯ್ಯನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಬಳಿಕ ಸಂವಿಧಾನದ ಪುಸ್ತಕ ಹಿಡಿದು ಪ್ರಮಾಣ ವಚನ ಸ್ವೀಕರಿಸಿದರು. 

ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ, ಮಲ್ಲಿಖಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವಿವಿಧ ಧರ್ಮಗುರುಗಳು ಮತ್ತು ಸಮುದಾಯಗಳ ಸ್ವಾಮೀಜಿಗಳಿಂದ ಡಿ.ಕೆ. ಶಿವಕುಮಾರ್ ಆಶೀರ್ವಾದ ಪಡೆದರು. ಇದೇ ವೇಳೆ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ದಂಪತಿಗಳ ಆಶೀರ್ವಾದವನ್ನೂ ಪಡೆದರು.

ರೇಷ್ಮೆ ಪಂಚೆ ಹಾಗೂ ರೇಷ್ಮೆ ಶಲ್ಯ ಧರಿಸಿ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರ ವೇಷಭೂಷಣ ಕೂಡ ವಿಶೇಷ ಗಮನ ಸೆಳೆಯಿತು. ಸಂಜೆ 4.05ಕ್ಕೆ ನಿಗದಿಯಾಗಿದ್ದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ 4.15ಕ್ಕೆ ಆರಂಭಗೊಂಡಿತು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top