ಡಿಕೆಶಿ ಸಿಎಂ ಹಿನ್ನೆಲೆ: ಸುಳ್ಯ ಚೆನ್ನಕೇಶವ ದೇವಳದಲ್ಲಿ ಕಾಂಗ್ರೆಸ್ ನಾಯಕರಿಂದ ವಿಶೇಷ ಪ್ರಾರ್ಥನೆ

Upayuktha
0

 



ಸುಳ್ಯ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಸುಳ್ಯದ ಶ್ರೀ ಚೆನ್ನಕೇಶವ ದೇವಳದಲ್ಲಿ ಕಾಂಗ್ರೆಸ್ ಮುಖಂಡರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಜೀವನ ಯಶಸ್ವಿಯಾಗಲಿ, ಮುಖ್ಯಮಂತ್ರಿ ಅವಧಿಯಲ್ಲಿ ರಾಜ್ಯಕ್ಕೆ ಉತ್ತಮ ಮಳೆ-ಬೆಳೆ ದೊರೆಯಲಿ ಹಾಗೂ ಯಾವುದೇ ಅಡೆತಡೆಗಳಿಲ್ಲದೆ ಸುಭೀಕ್ಷ ಆಡಳಿತ ನಡೆಸುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸುಳ್ಯ ಬ್ಲಾಕ್ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ವೆಂಕಪ್ಪ ಗೌಡ, ಡಿಕೆಶಿ ನೇತೃತ್ವದಲ್ಲಿ ರಾಜ್ಯ ಅಭಿವೃದ್ಧಿಯತ್ತ ಸಾಗುವ ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಗೀತಾ ಕೋಲ್ಚಾರ್, ನಂದರಾಜ್ ಸಂಕೇಶ, ಭವಾನಿ ಶಂಕರ ಸೇರಿದಂತೆ ಹಲವು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top