ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.100 ಅಂಕ: ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಜಿ. ಮಾಧುರ್ಯಗೆ ಸನ್ಮಾನ

Upayuktha
0

ಚಿತ್ರ: ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಜಿ. ಮಾಧುರ್ಯ ಅವರನ್ನು ಧರ್ಮಸ್ಥಳ ಅನ್ನಪೂರ್ಣ ಛತ್ರದ ಸಿಬ್ಬಂದಿಗಳು ಸನ್ಮಾನಿಸಿದ ಕ್ಷಣ.

ಧರ್ಮಸ್ಥಳ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ–2ರಲ್ಲಿ ಧರ್ಮಸ್ಥಳದ ಎಸ್.ಡಿ.ಎಂ. ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಜಿ. ಮಾಧುರ್ಯ ಅವರು 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.


ಮಾಧುರ್ಯ ಅವರು ಧರ್ಮಸ್ಥಳದ ಅನ್ನಪೂರ್ಣ ಛತ್ರದ ಪ್ರಬಂಧಕರಾದ ಸುಬ್ರಹ್ಮಣ್ಯ ಪ್ರಸಾದ್ ಹಾಗೂ ಮಧುರಾ ದಂಪತಿಯ ಪುತ್ರಿಯಾಗಿದ್ದಾರೆ.


ಅವರ ಈ ಅಪೂರ್ವ ಸಾಧನೆಯನ್ನು ಅಭಿನಂದಿಸಿ, ಜೂನ್ 8ರಂದು ಧರ್ಮಸ್ಥಳ ಅನ್ನಪೂರ್ಣ ಛತ್ರದ ಹಿರಿಯ ಸಿಬ್ಬಂದಿಗಳಾದ ಭರತ್‌ರಾಜ್ ಜೈನ್, ಶ್ರೇಣಿಕ್ , ರಾಜು ಸಪಲ್ಯ , ದೇವಿಪ್ರಸಾದ್ , ಅಪ್ಪು ಬಿ , ಬಾಬು ಬಿ , ಉಮೇಶ ಯಂ , ಬಾಕಕೃಷ್ಣ ಶೆಟ್ಟಿಹಾಗೂ ಇತರ ಸಿಬ್ಬಂದಿಗಳು ಜಿ. ಮಾಧುರ್ಯ ಅವರನ್ನು ಸನ್ಮಾನಿಸಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಸಿಬ್ಬಂದಿಗಳು, ಮಾಧುರ್ಯ ಅವರ ಸಾಧನೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದು, ಮುಂದಿನ ವಿದ್ಯಾಭ್ಯಾಸದಲ್ಲಿಯೂ ಇದೇ ರೀತಿ ಉನ್ನತ ಸಾಧನೆ ಮಾಡಿ ಕುಟುಂಬ, ಶಾಲೆ ಹಾಗೂ ಸಮಾಜಕ್ಕೆ ಕೀರ್ತಿ ತರಲಿ ಎಂದು ಹಾರೈಸಿದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top