ಅಡ್ಯನಡ್ಕ: ಇಲ್ಲಿನ ಜನತಾ ಪ್ರೌಢಶಾಲೆಯಲ್ಲಿ 8ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ದಾನಿಗಳ ನೆರವಿನಿಂದ ಉಚಿತ ಸಮವಸ್ತ್ರಗಳನ್ನು ವಿತರಿಸಲಾಯಿತು.
ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳ ಸಂಚಾಲಕರಾದ ಡಾ. ಅಶ್ವಿನಿ ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಡಳಿತ ಮಂಡಳಿ ಸದಸ್ಯರಾದ ಹರೀಶ್ ಬಳಂತಿಮೊಗರು ಹಾಗೂ ಹಳೆ ವಿದ್ಯಾರ್ಥಿ ಅನೀಶ್ ಭಟ್ ಅಡ್ಯನಡ್ಕ ಅವರು ದಾನಿಗಳ ಪರವಾಗಿ ಮಾತನಾಡಿದರು.
ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಆಡಳಿತಾಧಿಕಾರಿ ರಮೇಶ್ ಎಂ. ಬಾಯಾರು, ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಕೋಶಾಧಿಕಾರಿ ಕೇಶವ ಭಟ್ ಚವರ್ಕಾಡು ಶುಭ ಹಾರೈಸಿದರು. ಶಾಲಾ ಉಸ್ತುವಾರಿ ಗೋವಿಂದರಾಯ ಶೆಣೈ ಅಡ್ಯನಡ್ಕ, ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರವಿಕುಮಾರ್ ಆರ್ ಎಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದಾನಿಗಳಾದ ನಾರಾಯಣ ಪೈ ಬೆಂಗಳೂರು, ರವಿಶಂಕರ ಎಂ. ಯು., ಹರೀಶ್ ಬಳಂತಿಮೊಗರು, ಬಾಬು ಕೊಪ್ಪಳ, ಈಶ್ವರ ನಾಯ್ಕ ಬಾಕಿಲಪದವು, ಪ್ರಭಾಕರ ಬಾಕಿಲಪದವು, ಅನೀಶ್ ಭಟ್ ಅಡ್ಯನಡ್ಕ, ಯೋಗೀಶ್ ಸಾಯ ಇವರು ಸಮವಸ್ತ್ರಗಳ ವಿತರಣೆಗೆ ದಾನಿಗಳಾಗಿ ಸಹಕರಿಸಿರುತ್ತಾರೆ.
ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಟಿ. ಆರ್. ನಾಯ್ಕ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ಶಿಕ್ಷಕರಾದ ಶಿವಕುಮಾರ್ ಸಾಯ ಅವರು ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಕುಸುಮಾವತಿ ವಂದಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


