ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ಡಬಲ್ಸ್ ಕೇರಂ ಟೂರ್ನಿ

Upayuktha
0

 


ಮಂಗಳೂರು: ಶ್ರೀನಿವಾಸ್ ವಿಶ್ವವಿದ್ಯಾಲಯದ ಇನ್‌ಸ್ಟಿಟ್ಯೂಟ್ ಆಫ್ ಏವಿಯೇಷನ್ ಸ್ಟಡೀಸ್ ವತಿಯಿಂದ ಎಂ.ಬಿ.ಎ ಏವಿಯೇಷನ್ ಮ್ಯಾನೇಜ್‌ಮೆಂಟ್ ವಿದ್ಯಾರ್ಥಿಗಳಿಗಾಗಿ ಡಬಲ್ಸ್ ಕ್ಯಾರಂ ಟೂರ್ನಿಯನ್ನು ಜೂನ್ 27, 2026ರಂದು ಆಯೋಜಿಸಲಾಯಿತು.


ರೋಚಕ ಪೈಪೋಟಿಯ ಬಳಿಕ ಮೊದಲನೇ ವರ್ಷದ ಎಂ.ಬಿ.ಎ ಏವಿಯೇಷನ್ ಮ್ಯಾನೇಜ್‌ಮೆಂಟ್ ವಿದ್ಯಾರ್ಥಿಗಳಾದ ಬೆಂಗಲ್ಲಿ ಮನೀಶ್ ಮತ್ತು ಮೊಹಮ್ಮದ್ ವಾರಿಸ್ ಡಬಲ್ಸ್ ಕೇರಂ ಟೂರ್ನಿಯ ಚಾಂಪಿಯನ್‌ಗಳಾಗಿ ಹೊರಹೊಮ್ಮಿದರು.


ಈ ಕ್ರೀಡಾಕೂಟದ ಯಶಸ್ವಿ ಆಯೋಜನೆಗೆ ಶ್ರೀನಿವಾಸ್ ವಿಶ್ವವಿದ್ಯಾಲಯದ ಇನ್‌ಸ್ಟಿಟ್ಯೂಟ್ ಆಫ್ ಏವಿಯೇಷನ್ ಸ್ಟಡೀಸ್‌ನ ಡೀನ್ ಡಾ. ಪವಿತ್ರಾ ಕುಮಾರಿ, ವಿದ್ಯಾರ್ಥಿ ಕಲ್ಯಾಣಾಧಿಕಾರಿ, ವಿವಿಧ ವಿಭಾಗಗಳ ಮುಖ್ಯಸ್ಥರು, ಕ್ರೀಡಾ ಸಂಯೋಜಕರು ಹಾಗೂ ಬೋಧಕ ವೃಂದದ ಮಾರ್ಗದರ್ಶನ ಮತ್ತು ಸಹಕಾರ ಪ್ರಮುಖವಾಗಿತ್ತು. ಅವರ ಪ್ರೋತ್ಸಾಹದಿಂದ ವಿದ್ಯಾರ್ಥಿಗಳು ಕ್ರೀಡೆ ಹಾಗೂ ಮನರಂಜನಾ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದರು.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top