ಡಾ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಬೆಳ್ತಂಗಡಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್‌ಗೆ ಭೇಟಿ

Upayuktha
0

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷರಾದ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಸಿರಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರು ದಿನಾಂಕ 24-06-2026 ಬುಧವಾರದಂದು ಬೆಳ್ತಂಗಡಿಯಲ್ಲಿರುವ ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್‌ಗೆ ಭೇಟಿ ನೀಡಿದರು.


ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ವಿವಿಧ ಉತ್ಪಾದನಾ ವಿಭಾಗಗಳಿಗೆ ಭೇಟಿ ನೀಡಿ, ಅಲ್ಲಿನ ಉತ್ಪಾದನಾ ಚಟುವಟಿಕೆಗಳನ್ನು ವೀಕ್ಷಿಸಿದ ಶ್ರೀ ಹೆಗ್ಗಡೆ ದಂಪತಿಗಳು, ಸಿಬ್ಬಂದಿಗಳ ಕಾರ್ಯನಿಷ್ಠೆ ಹಾಗೂ ಸೇವಾ ಮನೋಭಾವವನ್ನು ಶ್ಲಾಘಿಸಿ ಶುಭ ಹಾರೈಸಿದರು.


ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್. ಜನಾರ್ಧನ ಅವರು ಶ್ರೀ ಹೆಗ್ಗಡೆ ದಂಪತಿಗಳನ್ನು ಹಾಗೂ ಶ್ರೀ ಹೆಗ್ಗಡೆಯವರ ಮೊಮ್ಮಗಳಾದ ಕು| ಮಾನ್ಯರವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಬಡ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣದ ಮಹೋದ್ದೇಶದಿಂದ ಸಿರಿ ಸಂಸ್ಥೆಗೆ ಸುಸಜ್ಜಿತ ಹಾಗೂ ಭವ್ಯ ನೂತನ ಕಟ್ಟಡವನ್ನು ನಿರ್ಮಿಸಿಕೊಟ್ಟು, ಸಿಬ್ಬಂದಿಗಳಿಗೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಅವರ ಶ್ರೇಯೋಭಿವೃದ್ಧಿಗೆ ಸದಾ ಪ್ರೋತ್ಸಾಹ ನೀಡುತ್ತಿರುವ ಶ್ರೀ ಹೆಗ್ಗಡೆ ದಂಪತಿಯವರಿಗೆ ಕೃತಜ್ಞತೆಗಳನ್ನು ಸಲ್ಲಿಸಿ, ಸಿರಿ ಸಂಸ್ಥೆಯ ವತಿಯಿಂದ ಗೌರವಾರ್ಪಣೆ ಸಮರ್ಪಿಸಲಾಯಿತು.


ಈ ಸಂದರ್ಭದಲ್ಲಿ ಸೇಲಂನಲ್ಲಿರುವ ಇಸ್ಕಾನ್ ದೇವಾಲಯದ ಶ್ರೀರಾಮಪ್ರಭು ಚಂದನದಾಸ ಸ್ವಾಮೀಜಿಯವರು, ರಾಜೇಶ್ ಪೈ, ಡಾ. ಹರೀಶ್ ಕೃಷ್ಣಸ್ವಾಮಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top