ಜಿಲ್ಲಾ ರೆಡ್‌ಕ್ರಾಸ್ ಸಭಾಪತಿಗಳಾಗಿ ಡಾ.ಅಶೋಕ್ ಕುಮಾರ್ ಆಯ್ಕೆ

Upayuktha
0

 


ಉಡುಪಿ: ಇತ್ತೀಚೆಗೆ ರೆಡ್ಕ್ರಾಸ್ ಭವನದಲ್ಲಿ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಮುಂದಿನ ವಾರ್ಷಿಕ ಮಹಾಸಭೆಯವರೆಗೆ ಜಿಲ್ಲಾ ರೆಡ್ಕ್ರಾಸ್ ಸಭಾಪತಿಗಳಾಗಿ ವೈದ್ಯರಾದ ಡಾ. ಅಶೋಕ್ ಕುಮಾರ್ ವೈ.ಜಿ. ಅವರನ್ನು ನೇಮಕ ಮಾಡಲಾಯಿತು.


     ಕರ್ನಾಟಕ ರಾಜ್ಯ ರೆಡ್ಕ್ರಾಸ್ ಸಭಾಪತಿಗಳಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಜಿಲ್ಲಾ ಸಭಾಪತಿ ಸ್ಥಾನಕ್ಕೆ ಬಸ್ರೂರು ರಾಜೀವ್ ಶೆಟ್ಟಿಯವರು ಸಭಾಪತಿ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ಅಂಗೀಕರಿಸಿದ ಆಡಳಿತ ಮಂಡಳಿಯು ನೇಮಕ ಮಾಡಿದೆ. ಡಾ.ಅಶೋಕ್ ಕುಮಾರ್ ವೈ.ಜಿಯವರು ಬಸ್ರೂರು ರಾಜೀವ್ ಶೆಟ್ಟಿ ಅವರಿಂದ ಸಭಾಪತಿಯಾಗಿ ಅಧಿಕಾರ ಸ್ವೀಕರಿಸಿದರು. ಅವರು ಕಳೆದ ಒಂದೂವರೆ ದಶಕದಿಂದ ಜಿಲ್ಲಾ ರೆಡ್ಕ್ರಾಸ್ ಆಡಳಿತ ಮಂಡಳಿಯ ಸದಸ್ಯರಾಗಿದ್ದರು.


    ಜಿಲ್ಲಾ ರೆಡ್ಕ್ರಾಸ್ಸಿನ ಉಪಸಭಾಪತಿಯಾಗಿ ಆಡಳಿತ ಮಂಡಳಿಯ ಸದಸ್ಯರಾದ ವಿ.ಜಿ. ಶೆಟ್ಟಿಯವರನ್ನು ಆಡಳಿತ ಮಂಡಳಿಯು ನೇಮಿಸಿ ಅವರು ಅಧಿಕಾರ ಸ್ವೀಕರಿಸಿದರು. ಸಭಾಪತಿಯಾಗಿ ಸೇವೆ ಸಲ್ಲಿಸಿ ಈಗ ಕರ್ನಾಟಕ ರಾಜ್ಯ ಸಭಾಪತಿಗಳಾಗಿರುವ ಬಸ್ರೂರು ರಾಜೀವ್ ಶೆಟ್ಟಿ ಅವರ ಸೇವೆಯನ್ನು ಆಡಳಿತ ಮಂಡಳಿ ಪ್ರಶಂಶಿಸಿದೆ. ಅವರು ಜಿಲ್ಲಾ ಆಡಳಿತ ಮಂಡಳಿ ಸದಸ್ಯರಾಗಿ ಮುಂದುವರಿಯುತ್ತಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top