ಆಟೋ ಚಾಲಕ-ಮಾಲಕರ ಸಂಘದಿಂದ ಶೈಕ್ಷಣಿಕ ಸಾಮಗ್ರಿ ಕೊಡುಗೆ

Upayuktha
0

ಸುರತ್ಕಲ್‌: ಬೈಕಂಪಾಡಿ ಆಟೋರಿಕ್ಷ ಚಾಲಕರ ಮಾಲಕರ ಸಂಘವು ಪ್ರತಿ ವರ್ಷವೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಳಾಯಿ ಫಿಶರೀಶ್ ಚಿತ್ರಾಪುರ ಇಲ್ಲಿಯ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡುತ್ತಿದ್ದು ಈ ಶೈಕ್ಷಣಿಕ ವರ್ಷದಲ್ಲಿ ಮೂವರು ವಿದ್ಯಾರ್ಥಿಗಳಿಗೆ ಕೊಡುಗೆಯನ್ನು ನೀಡಲಾಯಿತು.


ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ನವೀನ್ ಶ್ರೀಯಾನ್, ಗೌರವಾಧ್ಯಕ್ಷ ಪೂವಪ್ಪ ದೇವಾಡಿಗ ನೋಟ್ ಪುಸ್ತಕ, ಶಾಲಾ ಬ್ಯಾಗ್, ನಿಘಂಟು ಪುಸ್ತಕ ಮತ್ತು ಲೇಖನಿ ಸಾಮಗ್ರಿಗಳನ್ನು ವಿತರಿಸಿದರು.


ಮಕ್ಕಳ ಭವಿಷ್ಯ ನಿರ್ಮಾಣಕ್ಕೆ ನಿರಂತರವಾಗಿ ಪ್ರೋತ್ಸಾಹಿಸಿತ್ತಿರುವ ರಿಕ್ಷಾ ಚಾಲಕ ಮಾಲಕರ ಉದ್ಧಾತ ಕಾರ್ಯಕ್ಕೆ ಶಾಲಾ ಮುಖ್ಯ ಶಿಕ್ಷಕಿ ಶೋಭಾ ಮೆಚ್ಚುಗೆ ವ್ಯಕ್ತ ಪಡಿಸಿದರು.


ರಿಕ್ಷಾ ಮಾಲಕ ಚಾಲಕ ಸಂಘದ ಪ್ರಧಾನ ಕಾರ್ಯದರ್ಶಿ ರೋಹಿತ, ಕೋಶಾಧಿಕಾರಿ ಫಾರೂಕ್ ದೇಶಪ್ರೇಮಿ, ಸದಸ್ಯ ಮಾಧವ ಅಮೀನ್, ಶಿಕ್ಷಕಿಯರಾದ  ಸುಕೇಶಿನಿ, ಸಿಂತಿಯಾ, ರೂಪ, ವನಿತಾ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top