ಪರಿಸರ ಸಂರಕ್ಷಣೆ ಸಾಮೂಹಿಕ ಹೊಣೆ

Upayuktha
0

ಜಮಖಂಡಿ: ನಾವು ಪರಿಸರವನ್ನು ಉಳಿಸಿದರೆ ಪರಿಸರ ನಮ್ಮನ್ನು ಉಳಿಸುತ್ತದೆ. ಆದ್ದರಿಂದ ಪರಿಸರ ಸಂರಕ್ಷಣೆ ನಮ್ಮೆಲ್ಲರ ಸಾಮೂಹಿಕ ಹೊಣೆಯಾಗಿದೆ ಎಂದು ಬಿಎಲ್‌ಡಿಇ ಕಾನೂನು ಕಾಲೇಜಿನ ಇತಿಹಾಸ ಪ್ರಾಧ್ಯಾಪಕಿ ಭೀಮಾಬಾಯಿ ಮಾಳಶೆಟ್ಟಿ ಹೇಳಿದರು.


ಬಸವಜ್ಯೋತಿ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಮಹಾವಿದ್ಯಾಲಯದ ಸಹಯೋಗ ಹೊಂದಿರುವ ಮೂಡಬಿದರೆಯ ವಿದ್ಯಾಶಾರದ ಅಕಾಡೆಮಿಯ ಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

  

ಬಸವಜ್ಯೋತಿ ಶಿಕ್ಷಣ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ಪ್ರೊ.ಬಸವರಾಜ ಕಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಠಿಣ ಪರಿಶ್ರಮಕ್ಕೆ ಮತ್ತೊಂದು ಪರ್ಯಾಯವಿಲ್ಲ. ಕೆಲಸ ಮಾಡುವವರನ್ನು ಕೆಲಸ ಕಾಪಾಡುತ್ತದೆ ಎಂದರು.


ಪ್ರಾಚಾರ್ಯ ಡಾ.ಟಿ.ಪಿ. ಗಿರಡ್ಡಿ ಮುಖ್ಯ ಅತಿಥಿಯಾಗಿ ಮಾತನಾಡಿ, ಮುಂದಿನ ಪೀಳಿಗೆ ತಮ್ಮ ಅಗತ್ಯಗಳನ್ನು ಪೂರೈಸಿಕೊಳ್ಳುವ ಸಾಮರ್ಥ್ಯಕ್ಕೆ ಕುಂದುಬರದAತೆ ಇಂದಿನ ಪೀಳಿಗೆಯು ತಮ್ಮ ಅಗತ್ಯಗಳನ್ನು ಪೂರೈಸಿಕೊಳ್ಳುವ ಅಭಿವೃದ್ಧಿಯನ್ನು ಸುಸ್ಥಿರ ಅಭಿವೃದ್ಧಿ ಎನ್ನಲಾಗುತ್ತದೆ ಎಂದರು.


ಸುದರ್ಶನ ತೇಜಸ್ವಿ, ದಾನೇಶ ಮೋಪಗಾರ ಇದ್ದರು. ಕೀರ್ತಿ ಹಾಗೂ ಸಂಗಡಿಗರು ಪ್ರಾರ್ಥನೆ ಗೀತೆ ಹಾಡಿದರು. ರಾಹುಲ ಅತಿಥಿಗಳನ್ನು ಪರಿಚಯಿಸಿದರು. ವಿನಾಯಕ ನಿರೂಪಿಸಿದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top