ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಅಭಿನಂದನಾ ಕಾರ್ಯಕ್ರಮ

Upayuktha
0

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ಸಿ.ಬಿ.ಎಸ್.ಇ ವಿದ್ಯಾಲಯದಲ್ಲಿ ಶನಿವಾರದಂದು 2025 -26 ನೇ ಸಾಲಿನಲ್ಲಿ ಹತ್ತನೇ ತರಗತಿಯಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. 

ಶಾಲಾ ಪ್ರಾಂಶುಪಾಲೆ ಮಾಲತಿ ಡಿ. ಮಾತನಾಡಿ ನಾವೆಲ್ಲರೂ ರಾಷ್ಟ್ರಕ್ಕಾಗಿ ಸೇವೆಯನ್ನು ಸಲ್ಲಿಸಬೇಕು. ನಿಗದಿತ ಗುರಿಯೊಂದಿಗೆ ಮುನ್ನಡೆಯುತ್ತಾ  ಜೀವನದಲ್ಲಿ ಏನನ್ನಾದರೂ ಸಾಧಿಸಿ ತೋರಿಸುವ ಮಟ್ಟಕ್ಕೆ ಬೆಳೆದು ನಿಲ್ಲಬೇಕು. ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಮಾರ್ಗದರ್ಶನವನ್ನು ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ತಿಳಿ ಹೇಳಿದರು.  

ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಚಂದ್ರಕಾಂತ್ ಪೈ ಹಾಗೂ ದೀಪಿಕಾ ಕಜೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.  ಶಿಕ್ಷಕಿಯರಾದ ಅಶ್ವಿನಿ, ಕೃತಿಕ ಹಾಗೂ ದೀಪ್ತಿ ಮಕ್ಕಳಿಗೆ ಶುಭ ಹಾರೈಸಿದರು.  2025-26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ವೇದಿಕೆಯಲ್ಲಿ ವಿದ್ಯಾಲಯದ  ಉಪಪ್ರಾಂಶುಪಾಲೆ  ಸುಜನಿ ಬೋರ್ಕರ್ ಉಪಸ್ಥಿತರಿದ್ದರು.  ಶಿಕ್ಷಕಿಯರಾದ ಸಹನಾ ಪ್ರಾರ್ಥಿಸಿ, ಕೃತಿಕ ಕಾರ್ಯಕ್ರಮವನ್ನು ನಿರ್ವಹಿಸಿ, ವಂದಿಸಿದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top