ನೂತನ ಬಿಇಒ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಭಿನಂದನೆ

Upayuktha
0

ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರ  ಶಿಕ್ಷಣಾಧಿಕಾರಿಯಾಗಿದ್ದ ತಾರಕೇಸರಿ ಅವರ ನಿವೃತ್ತಿಯ ಬಳಿಕ ಪದೋನ್ನತಿಯ ಮೂಲಕ ನೂತನವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ನೇಮಕಗೊಂಡಿರುವ ಜಯಶ್ರೀ ಇವರಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಭಿನಂದನೆಯನ್ನು ಕೋರಲಾಯಿತು. 


ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಧನ್ಯ ಕುಮಾರ್ ಮತ್ತು ಮಾನವ ಸಂಪನ್ಮೂಲ ಅಧಿಕಾರಿ ಅಜಯ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ಭೇಟಿ ನೀಡಿ, ಶಿಕ್ಷಣ ಕ್ಷೇತ್ರದಲ್ಲಿ ಜಯಶ್ರೀ ರವರ ಕಳೆದ  3 ದಶಕಗಳ ಅನುಭವ ಮತ್ತು ಸೇವೆಯನ್ನು ಗುರುತಿಸಿ ಶ್ಲಾಘಿಸಿ ಶುಭ ಹಾರೈಸಿದರು. ಇದೇ ವೇಳೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ವ್ಯವಸ್ಥೆ ಮತ್ತು ಮೌಲ್ಯಯುತ ಶಿಕ್ಷಣದ ಕುರಿತು ಮೆಚ್ಚುಗೆಯನ್ನು ‌ವ್ಯಕ್ತಪಡಿಸಿದರು. 


ಭೇಟಿಯ ವೇಳೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಸಾರ್ವಜನಿಕ ಸಂಪರ್ಕ ವಿಭಾಗದ ಅರವಿಂದ ಸೇರಿದಂತೆ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top