ಉಡುಪಿ: ಜಾನುವಾರು ಕಟ್ಟೆ ಸರ್ಕಾರಿ ಪ್ರೌಢಶಾಲೆ ಇದರ 2026-27 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ ಸಮಾರಂಭವು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ಸಹಯೋಗದೊಂದಿಗೆ ಸಂಸ್ಥೆಯಲ್ಲಿ ಜರಗಿತು,
ಜಯಂಟ್ಸ್ ಗ್ರೂಪ್ ಬ್ರಹ್ಮಾವರ ಇದರ ಅಧ್ಯಕ್ಷ ಅಣ್ಣಯ್ಯ ದಾಸ್ ನೋಟ್ ಪುಸ್ತಕಗಳನ್ನು ಹಸ್ತಾಂತರಿಸಿದರು. ಪದಾಧಿಕಾರಿಗಳಾದ ಮಿಲ್ಟನ್ ಒಲಿವೇರ, ರಾಘವೇಂದ್ರ ಪ್ರಭು ಕರ್ವಾಲ್, ಶ್ರೀನಾಥ್ ಕೋಟ ಹಾಗೂ ವಿವೇಕಾನಂದ ಕಾಮತ್ ಉಪಸ್ಥಿತರಿದ್ದರು. ಸಂಸ್ಥೆಯ ಮುಖ್ಯ ಶಿಕ್ಷಕಿ ಕವಿತಾ ಪ್ರಸಾದ್ ಸ್ವಾಗತಿಸಿ ವಂದಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

