ಉತ್ತಮ ಹವ್ಯಾಸಗಳು ಬದುಕಿಗೆ ಹೊಸ ಅರ್ಥ ನೀಡಬಲ್ಲದು : ರಾಘವೇಂದ್ರ ಕರ್ವಾಲು

Upayuktha
0

ಕಟಪಾಡಿ: ನಮ್ಮ ದೃಷ್ಟಿಕೋನವನ್ನು ಬದಲಾಯಿಸಿದಲ್ಲಿ ದೃಶ್ಯ ಬದಲಾಗಬಹುದು, ಉತ್ತಮ ಹವ್ಯಾಸಗಳು ನಮ್ಮ ಜೀವನಕ್ಕೆ ಹೊಸ ಅರ್ಥವನ್ನು ನೀಡಬಲ್ಲದು ಎಂದು ವ್ಯಕ್ತಿತ್ವ ವಿಕಸನ ತರಬೇತಿದಾರ ರಾಘವೇಂದ್ರ ಪ್ರಭು ಕರ್ವಾಲು ಹೇಳಿದರು.


ಅವರು ಬೆಳ್ಮಣ್ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆದ ಮಾದಕ ವ್ಯಸನ ತಡೆಗಟ್ಟುವ ದಿನಾಚರಣೆ ಅಂಗವಾಗಿ ಜೂನ್ 25ರಂದು  ನಡೆದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಜೆಸಿಐ ಬೆಳ್ಮಣ್, ಕಾಲೇಜಿನ ಇಕೋ ಕ್ಲಬ್ ಮತ್ತು ಸ್ಥಳೀಯ ಗ್ರಾಮ ಪಂಚಾಯತ್ ಸಂಜೀವಿನಿ ಒಕ್ಕೂಟದ ವತಿಯಿಂದ ಕಾರ್ಯಕ್ರಮ ನಡೆಯಿತು.


ವಿದ್ಯಾರ್ಥಿಗಳು ಕೆಟ್ಟ ಆಲೋಚನೆಗಳಿಂದ ದೂರವಿರಬೇಕು. ದುಶ್ಚಟಗಳಿಂದ ಆರೋಗ್ಯ, ಆರ್ಥಿಕ ಮತ್ತು ಸಾಮಾಜಿಕವಾಗಿ ಬಹಳಷ್ಟು ತೊಂದರೆ ಅನುಭವಿಸಬೇಕಾಗುತ್ತದೆ ಈ ನಿಟ್ಟಿನಲ್ಲಿ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಿ ಎಂದು ಕರೆ ನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ಮಣ್ ಅಧ್ಯಕ್ಷ ವೀರೇಂದ್ರ ಆರ್ ಕೆ ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕ ಗೋಪಾಲ್, ಜಯಂತಿ ಶೆಟ್ಟಿ, ವಲಯ ಉಪಾಧ್ಯಕ್ಷ ಪ್ರದೀಪ್ ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ನಶಾಮುಕ್ತ ಭಾರತ ಪ್ರಮಾಣವಚನ ಬೋಧಿಸಲಾಯಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top