ಕಾಟಿಪಳ್ಳ ಸರ್ಕಾರಿ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ

Upayuktha
0

ಸುರತ್ಕಲ್:‌ ಸರ್ಕಾರಿ ಪ್ರೌಢಶಾಲೆ ಕಾಟಿಪಳ್ಳ 5 ನೇ ವಿಭಾಗದಲ್ಲಿ ಹಳೆ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಸೋಮವಾರ (ಜೂ.8) ಹಮ್ಮಿಕೊಳ್ಳಲಾಯಿತು.


ಕಾರ್ಯಕ್ರಮದ ಉದ್ಘಾಟಕರಾಗಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಕಲ್ಪವೃಕ್ಷಕ್ಕೆ ನೀರುಣಿಸುವ ಮೂಲಕ ಚಾಲನೆ ನೀಡಿದರು.


ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಅಭಿಯಂತರರು ಹಾಗೂ ದಾನಿಗಳಾದ  ಗೊಕುಲ್ ದಾಸ್, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರು, ಪ್ರಾಥಮಿಕ ಹಾಗೂ ಪ್ರೌಢಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರು ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಶಾಸಕ ಡಾ. ವೈ. ಭರತ್ ಶೆಟ್ಟಿಯವರು ಸರ್ಕಾರಿ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಶ್ಲಾಘಿಸಿ ವಿದ್ಯಾರ್ಥಿಗಳಿಗೆ ಹಿತವಚನಗಳನ್ನು ನೀಡಿದರು.


ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರನ್ನು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಸ್ವಾಗತಿಸಿ, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ವಂದಿಸಿದರು. ಸೌಮ್ಯ ನಾಯಕ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.


ಈ ಸಂದರ್ಭದಲ್ಲಿ, ಹಳೇ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ಪಿ. ಸುಧಾಕರ್ ಕಾಮತ್, ಅಶೋಕ್ ಕೃಷ್ಣಾಪುರ, ನರೇಶ್ ಅಮೀನ್, ಕರುಣಾಕರ ದೇವಾಡಿಗ, ಪ್ರಶಾಂತ್ ಆಚಾರ್ಯ, ಸತೀಶ್ ಸಾಲಿಯಾನ್, ಮೋಹನ ಮೂಲ್ಯ, ಮಾಧವ ಬಂಗೇರ, ವಿಶ್ವನಾಥ ಮೂಲ್ಯ ಹಾಗೂ ಮುಖ್ಯಶಿಕ್ಷಕರು, ಶಾಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top