ಮಂಗಳೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಫಿಶರೀಶ್ ಚಿತ್ರಾಪುರ ಕುಳಾಯಿ ಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ದೇವದಾಸ ಕುಳಾಯಿ ಉದ್ಘಾಟಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಯೋಗವು ಮನಸು ಮತ್ತು ಕ್ರಿಯೆಯ ಏಕತೆಯನ್ನು ಒಳಗೊಂಡಿದ್ದು ಉತ್ತಮ ಆರೋಗ್ಯಕ್ಕೆ ಸಹಕಾರಿ ಎಂದರು.
ಸುರತ್ಕಲ್ ರೋಟರಿ ಕ್ಲಬ್ ನ ನಿರ್ದೇಶಕ ಕೃಷ್ಣಮೂರ್ತಿ ಚಿತ್ರಾಪುರ ಮಾತನಾಡಿ ಶಿಸ್ತಿನ ಚಟುವಟಿಕೆ ಗಳನ್ನು ನಡೆಸಲು ವಿದ್ಯಾರ್ಥಿಗಳಿಗೆ ಯೋಗ ಪ್ರೇರಕ ಎಂದರು.
ಹಳೆ ವಿದ್ಯಾರ್ಥಿ ಸಂಘದ ಸದಸ್ಯ ಮತ್ತು ಯೋಗ ಗುರು ತೇಜಪಾಲ ಪುತ್ರನ್ ಯೋಗಾಸನ ಕಲಿಸಿ ಕೊಟ್ಟು ಯೋಗದ ಪ್ರಯೋಜನ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸ ಬೇಕು ಎಂದರು.
ಯೋಗ ಗುರುಗಳಾದ ರೋಟರಿ ಕ್ಲಬ್ ಮಂಗಳೂರು ಕೋಸ್ಟಲ್ ನ ತನುಜಾ ಸುಭೋದ್ ಮತ್ತು ತಾರಾ ಹರೀಶ್ ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆ ನಡೆಸಿ ಕೊಟ್ಟರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಶಶಿಕಲಾ, ಹಿರಿಯ ಶಿಕ್ಷಕಿ ಸುಕೇಶಿನಿ, ರೂಪ, ವನಿತಾ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶೋಭಾ ಸ್ವಾಗತಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


