ಅದಮ್ಯ ಚೇತನಾ ವಿಶೇಷ ಮಕ್ಕಳ ವಸತಿಯುತ ಶಾಲೆ ಹಾಗೂ ಫಿಸಿಯೋಥೆರಪಿ ಘಟಕ ಉದ್ಘಾಟನೆ

Upayuktha
0

ಮಂಗಳೂರು: ಸೇವಾ ಭಾರತಿ (ರಿ.) ಮಂಗಳೂರು ಇದರ ಮಾಧವವನ, ಮೊಂಟೆಪದವುದಲ್ಲಿರುವ ಅಂಕುರ ಕಟ್ಟಡದಲ್ಲಿ ವಿಶೇಷ ಮಕ್ಕಳ ವಸತಿಯುತ ಶಾಲೆ, ಫಿಸಿಯೋಥೆರಪಿ ಘಟಕ ಉದ್ಘಾಟನೆ ಹಾಗೂ ಅದಮ್ಯ ಚೇತನಾ ಶಾಲೆಯ ಪುನರಾರಂಭ ಕಾರ್ಯಕ್ರಮವು ಜೂನ್ 1ರಂದು ವಿಜೃಂಭಣೆಯಿಂದ ನಡೆಯಿತು.


ಕಾರ್ಯಕ್ರಮದ ಅಂಗವಾಗಿ ವಿಶೇಷ ಚೇತನ ಮಕ್ಕಳನ್ನು ತೆಂಗಿನಕಾಯಿ ಒಡೆಯುವ ಮೂಲಕ ಸ್ವಾಗತಿಸಿ, ನಾದಸ್ವರ, ಗೊಂಬೆ, ಕಳಶ ಹಾಗೂ ಚೆಂಡೆವಾದನಗಳೊಂದಿಗೆ ಅದಮ್ಯ ಚೇತನಾ ಶಾಲೆಯವರೆಗೆ ಭವ್ಯ ಮೆರವಣಿಗೆ ನಡೆಸಲಾಯಿತು. ಈ ಮೆರವಣಿಗೆಯಲ್ಲಿ ವಿಶೇಷ ಚೇತನ ಮಕ್ಕಳು ತಮ್ಮ ಪೋಷಕರೊಂದಿಗೆ ಉತ್ಸಾಹದಿಂದ ಭಾಗವಹಿಸಿದರು.


ಕ್ಯಾಂಪ್ಕೋ ಲಿಮಿಟೆಡ್‌ನ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಅವರು ರಿಬ್ಬನ್ ಕತ್ತರಿಸುವ ಮೂಲಕ ಶಾಲೆಯ ಪುನರಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಶಿಕ್ಷಕರು ಹಾಗೂ ಸ್ವಯಂಸೇವಕರು ಆರತಿ ಬೆಳಗಿ, ಸಿಹಿ ಹಂಚುವ ಮೂಲಕ ಮಕ್ಕಳನ್ನು ಶಾಲೆಗೆ ಸ್ವಾಗತಿಸಿದರು.


ಅದಾನಿ ಪವರ್ ಲಿಮಿಟೆಡ್‌ನ ಅಸೋಸಿಯೇಟ್ ಜನರಲ್ ಮ್ಯಾನೇಜರ್ ರವಿ ಆರ್. ಜೆರೆ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಅದಮ್ಯ ಚೇತನಾ ದಿವ್ಯಾಂಗ ಮಕ್ಕಳ ವಸತಿಯುತ ಶಾಲೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಲೆ ಹಾಗೂ ಸಂಸ್ಥೆಯ ಕಾರ್ಯವೈಖರಿಯನ್ನು ಅವರು ಶ್ಲಾಘಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.


ಎಂಆರ್‌ಪಿಎಲ್‌ನ ಸಹಕಾರದಿಂದ ನಿರ್ಮಾಣಗೊಂಡಿರುವ ಫಿಸಿಯೋಥೆರಪಿ ಘಟಕವನ್ನು ಎಂಆರ್‌ಪಿಎಲ್‌ನ ಗ್ರೂಪ್ ಜನರಲ್ ಮ್ಯಾನೇಜರ್ (ಮಾನವ ಸಂಪನ್ಮೂಲ) ಪ್ರಸಾಂತ್ ಶಂಕರ್ ಪೊದುವಾಳ್ ಉದ್ಘಾಟಿಸಿದರು. ಹೆಚ್ಚಿನ ಮಕ್ಕಳಿಗೆ ಅನುಕೂಲವಾಗುವಂತೆ ರೂಪುಗೊಂಡಿರುವ ಸಂವೇದನಾಶೀಲ ಕೋಣೆ ಹಾಗೂ ಫಿಸಿಯೋಥೆರಪಿ ಸೌಲಭ್ಯಗಳ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.


ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೃಥ್ವೀಪಾಲ್ ಕೆ. ಪ್ರಾಸ್ತಾವಿಕ ಭಾಷಣ ಮಾಡಿದರು. ಸೇವಾ ಭಾರತಿ ಸಂಸ್ಥೆಯ ಅಧ್ಯಕ್ಷರಾದ ಎಸ್. ಮುಕುಂದ್ ಕಾಮತ್ ಅಧ್ಯಕ್ಷೀಯ ಭಾಷಣ ಮಾಡಿದರು.


ಕಾರ್ಯಕ್ರಮದಲ್ಲಿ ಸಂಸ್ಥೆಯ ಗೌರವ ಕಾರ್ಯದರ್ಶಿ ಹೆಚ್. ನಾಗರಾಜ್ ಭಟ್, ಕೋಶಾಧಿಕಾರಿ ಪಿ. ವಿನೋದ್ ಶೆಣೈ, ಟ್ರಸ್ಟಿಗಳಾದ ಡಾ. ಕೆ.ಆರ್. ಕಾಮತ್ ಹಾಗೂ ಡಾ. ಸತೀಶ್ ರಾವ್, ಸಲಹಾ ಸಮಿತಿಯ ಸದಸ್ಯೆ ಶ್ರೀಮತಿ ಸುಮನ ಘಾಟೆ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವರ್ಷ, ಸಂಸ್ಥೆಯ ವಿಶ್ವಸ್ಥರು, ಸ್ವಯಂಸೇವಕರು, ಮಕ್ಕಳ ಪೋಷಕರು ಹಾಗೂ ಶಾಲೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ಶಿಕ್ಷಕಿ ಉಷಾ ಹಾಗೂ ಲೆಕ್ಕಿಗರಾದ ದೀಕ್ಷಿತಾ ಸ್ವಾಗತಿಸಿದರು. ರೇಖಾ ವಂದಿಸಿದರು. ಯಶೋದಾ ಮತ್ತು ಲಿಖಿತಾ ಕಾರ್ಯಕ್ರಮ ನಿರೂಪಿಸಿದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top