ನಿರಂತರ ಯೋಗದಿಂದ ಮಾನಸಿಕ ಸಮತೋಲನ ಸಾಧ್ಯ : ಸುಬ್ರಮಣ್ಯ ನಟ್ಟೋಜ
ಪುತ್ತೂರು: ನಿರಂತರ ಯೋಗಾಭ್ಯಾಸದಿಂದ ಮಾನಸಿಕ ಸಮತೋಲನ ಮತ್ತು ದೈಹಿಕ ಸಧೃಡತೆಯನ್ನ ಸಾಧಿಸಬಹುದು. ಇದರಿಂದಾಗಿ ಒಬ್ಬ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆ ಸಾಧ್ಯ. ಯೋಗ ಎಂಬುದು ಭಾರತದ ಪರಿಕಲ್ಪನೆ. ಅದನ್ನು ವಿಶ್ವಕ್ಕೆ ಪಸರಿಸಿದ ಕೀರ್ತಿ ಭಾರತದ್ದು. ಆದರೆ ವಿಪರ್ಯಾಸ ಎಂಬAತೆ ಇಂದು ಭಾರತದ ಅನೇಕ ಶಿಕ್ಷಣಸಂಸ್ಥೆಗಳು ಯೋಗವನ್ನು ವರ್ಜ್ಯ ಎಂಬAತೆ ಪರಿಗಣಿಸುತ್ತಿದೆ. ಇದರಿಂದಾಗಿ ನಮ್ಮ ಮಕ್ಕಳಲ್ಲಿನ ಅಂತಃಸತ್ವವು ಕ್ಷೀಣಿಸುತಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ತಿಳಿಸಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಆರ್ಟ್ ಆಫ್ ಲಿವಿಂಗ್ ಸಹಯೋಗದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಯೋಗತರಬೇತಿ ತರಗತಿಗಳನ್ನು ಉದ್ಘಾಟಿಸಿ ಸೋಮವಾರ ಮಾತನಾಡಿದರು.
ಪ್ರತಿಯೊಬ್ಬರೂ ಯೋಗದಂತಹ ಭಾರತೀಯ ಕಲೆಗಳನ್ನು ಮೈಗೂಡಿಸಿಕೊಂಡು ಮುಂದೊAದು ದಿನ ಇಡೀ ವಿಶ್ವದ ಮೇಲೆ ಬೌದ್ಧಿಕ ವಿಜಯವನ್ನು ಸಾಧಿಸಿ ಭಾರತವು ಸದಾ ವಿಶ್ವಗುರು ಎಂಬುದನ್ನು ನಿರೂಪಿಸಬೇಕು ಎಂದು ತಿಳಿಸಿದರು.
ಆರ್ಟ್ ಆಫ್ ಲಿವಿಂಗ್‌ನ ಯೋಗ ಶಿಕ್ಷಕಿ ಶರಾವತಿ ರವಿನಾರಾಯಣ ಯೋಗ ತರಬೇತಿ ನೀಡಿದರು ಯೋಗ ಶಿಕ್ಷಕಿ ದೀಪಿಕಾ ಸಹಕರಿಸಿದರು. ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ನಟ್ಟೋಜಾ ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಂಶುಪಾಲರಾದ ಗಣೇಶ್ ಪ್ರಸಾದ್ ಡಿ.ಎಸ್. ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪೃಥ್ವಿ ಬಿ.ಎಂ. ಹಾಗೂ ಧನ್ಯಶ್ರೀ ರ್ಪ್ರಾರ್ಥಿಸಿದರು. ರಸಾಯನಶಾಸ್ತ್ರ ಉಪನ್ಯಾಸಕಿ ಅಪರ್ಣಾ ಉಪಾಧ್ಯಾಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


