ಬೆಂಗಳೂರು: ನಿಟ್ಟೆ (ಡೀಮ್ಡ್ ಟು ಬಿ ಯುನಿವರ್ಸಿಟಿ) ಬೆಂಗಳೂರು ಕ್ಯಾಂಪಸ್‌ನಲ್ಲಿ “ದೈನಂದಿನ ಜೀವನದಲ್ಲಿ ಯೋಗ” ಎಂಬ ಧ್ಯೇಯವಾಕ್ಯದೊಂದಿಗೆ ನಾಲ್ಕು ದಿನಗಳ ಅಂತರರಾಷ್ಟ್ರೀಯ ಯೋಗ ದಿನಾಚರಣೆ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಿಬ್ಬಂದಿಯಲ್ಲಿ ದೈಹಿಕ ಆರೋಗ್ಯ, ಮಾನಸಿಕ ನೆಮ್ಮದಿ ಹಾಗೂ ಯೋಗವನ್ನು ದೈನಂದಿನ ಜೀವನದ ಅವಿಭಾಜ್ಯ ಅಂಗವನ್ನಾಗಿ ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನಾ ಸಮಾರಂಭಕ್ಕೆ ಯಶವಂತಪುರದ ವಿವೇಕಾನಂದ ಯೋಗ ಕೇಂದ್ರದ ಶ್ರೀ ಸಿ. ಡಿ. ಸಂಪತ್ ಕುಮಾರ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಉತ್ತಮ ಆರೋಗ್ಯ, ಮಾನಸಿಕ ಸಮತೋಲನ ಮತ್ತು ಸಮಗ್ರ ಜೀವನಮಟ್ಟಕ್ಕಾಗಿ ಯೋಗಾಭ್ಯಾಸದ ಮಹತ್ವವನ್ನು ವಿವರಿಸಿದರು. ಯೋಗವನ್ನು ಪ್ರತಿಯೊಬ್ಬರೂ ತಮ್ಮ ದಿನನಿತ್ಯದ ಜೀವನಶೈಲಿಯ ಭಾಗವನ್ನಾಗಿ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.
ನಿಟ್ಟೆ ಮೀನಾಕ್ಷಿ ತಾಂತ್ರಿಕ ವಿದ್ಯಾಲಯದ (NMIT) ಪ್ರಾಂಶುಪಾಲರಾದ ಡಾ. ಎಚ್. ಸಿ. ನಾಗರಾಜ್ ಅವರು ಮುಖ್ಯ ಅತಿಥಿಗಳನ್ನು ಸನ್ಮಾನಿಸಿದರು. ಆರೋಗ್ಯಕರ ಹಾಗೂ ಸಮತೋಲಿತ ಜೀವನಶೈಲಿಯನ್ನು ಉತ್ತೇಜಿಸಲು ಮತ್ತು ಯೋಗದ ಮಹತ್ವವನ್ನು ಸಮಾಜದಲ್ಲಿ ಪ್ರಸಾರಗೊಳಿಸಲು ಸಂಸ್ಥೆಯು ಬದ್ಧವಾಗಿದೆ ಎಂದು ಅವರು ತಿಳಿಸಿದರು.
ನಿಟ್ಟೆ ಬೆಂಗಳೂರು ಕ್ಯಾಂಪಸ್‌ನ ವಿವಿಧ ಸಂಸ್ಥೆಗಳ ಪ್ರಾಂಶುಪಾಲರು, ಅಧ್ಯಾಪಕರು ಹಾಗೂ ಸಿಬ್ಬಂದಿ ವರ್ಗದವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಜೂನ್ 18 ರಿಂದ 21, 2026ರವರೆಗೆ ನಡೆಯಲಿರುವ ಈ ನಾಲ್ಕು ದಿನಗಳ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉತ್ಸಾಹದಿಂದ ಭಾಗವಹಿಸಲಿದ್ದಾರೆ.
ಮಾರ್ಗದರ್ಶಿತ ಯೋಗಾಭ್ಯಾಸಗಳು ಹಾಗೂ ಯೋಗದ ಕುರಿತು ಜಾಗೃತಿ ಕಾರ್ಯಕ್ರಮಗಳು ಆಯೋಜಿಸಲಾಗಿದ್ದು, ಯೋಗವನ್ನು ಜೀವನ ಪದ್ಧತಿಯಾಗಿ ಅಳವಡಿಸಿಕೊಳ್ಳಲು ಪ್ರೇರೇಪಿಸುವ ಉದ್ದೇಶ ಹೊಂದಿದೆ. ನಿಟ್ಟೆ ಕುಟುಂಬದ ಸದಸ್ಯರು ಉತ್ಸಾಹದಿಂದ ಭಾಗವಹಿಸಿದ್ದು, ಸಮಗ್ರ ವ್ಯಕ್ತಿತ್ವ ವಿಕಾಸ ಮತ್ತು ಆರೋಗ್ಯಕರ ಜೀವನಕ್ಕೆ ಸಂಸ್ಥೆಯ ಬದ್ಧತೆಯನ್ನು ಈ ಕಾರ್ಯಕ್ರಮ ಪ್ರತಿಬಿಂಬಿಸುತ್ತದೆ
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


