ವಿವೇಕಾನಂದ ಪ.ಪೂ. ಕಾಲೇಜು ವಸತಿನಿಲಯಗಳಲ್ಲಿ ಯೋಗ ಶಿಬಿರ

Upayuktha
0

 


ಪುತ್ತೂರು: ಇಲ್ಲಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ತಕ್ಷಶಿಲಾ ಹಾಗೂ ಶಾರದ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗಾಗಿ ಯೋಗ ಶಿಬಿರ ಪ್ರಾರಂಭಗೊಂಡಿರುತ್ತದೆ. ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣವೆಂಬ ಧ್ಯೇಯದೊಂದಿಗೆ ಕಾರ್ಯಾಚರಿಸುತ್ತಿರುವ ವಿವೇಕಾನಂದ ಪದವಿಪೂರ್ವ ಕಾಲೇಜು ಹಾಗೂ ಸಂಸ್ಕಾರ- ಸಂಘಟನೆ - ಸೇವೆ ಎಂಬ ಧ್ಯೇಯೋದ್ದೇಶದೊಂದಿಗೆ ಯೋಗ ಶಿಕ್ಷಣವನ್ನು ನೀಡುತ್ತಿರುವ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕರ್ನಾಟಕ, ಪುತ್ತೂರು ತಾಲೂಕು ಸಮಿತಿಯ ಸಹಯೋಗದೊಂದಿಗೆ ಈ ಶಿಬಿರ ನಡೆಯುತ್ತಿದೆ. 


ತಕ್ಷಶಿಲಾ ಬಾಲಕರ ವಸತಿನಿಲಯ ಹಾಗೂ ಶಾರದ ಬಾಲಕಿಯರ ವಸತಿ ನಿಲಯಗಳಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಯೋಗ ಶಿಕ್ಷಕರಾದ ಜಯಪ್ರಸಾದ್ ಹಾಗೂ  ಹರಿಪ್ರಸಾದ್, ಜಿಲ್ಲಾ ಸಂಘಟನ ಪ್ರಮುಖರು ಇವರ ನೇತೃತ್ವದಲ್ಲಿ ಯೋಗ ಶಿಬಿರವು ನಡೆಯುತ್ತಿದೆ. 


ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಹಾಗೂ ಏಕಾಗ್ರತೆಯನ್ನು ಹೆಚ್ಚಿಸುವ ಉದ್ದೇಶದೊಂದಿಗೆ ಈ ಯೋಗ ಶಿಬಿರವನ್ನು ನಡೆಸಲಾಗುತ್ತಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top