ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳಿಗೆ ಮಾಹಿತಿ ಕಾರ್ಯಕ್ರಮ

Upayuktha
0

 


      ಉಡುಪಿ: ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಇವರ ಸಹಯೋಗದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ವಿಭಾಗಗಳ  ಮೇಲ್ವಿಚಾರಕಿಯರಿಗೆ  ಸೌರಶಕ್ತಿ, ಸಾವಯವ ಕೃಷಿ ಎರೆಹುಳು ಗೊಬ್ಬರ ತಯಾರಿಕೆ ಹಾಗೂ ಯೋಗ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ಒಂದು ದಿನದ ಮಾಹಿತಿ ಕಾರ್ಯಕ್ರಮವು ಬುಧವಾರ ಉಡುಪಿಯ ಬಾಲಭವನ ಇಲ್ಲಿ ನಡೆಯಿತು.


    ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅನುರಾಧ ಹಾದಿಮನಿ ಉದ್ಘಾಟಿಸಿ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಇಲಾಖೆ ಹಾಗೂ ಬಿ.ವಿ.ಟಿ ಮಹಿಳಾ ಸಬಲೀಕರಣದ ಕ್ಷೇತ್ರದಲ್ಲಿ ಅನೇಕ ತರಬೇತಿಗಳನ್ನು ಜಂಟಿಯಾಗಿ ಹಮ್ಮಿಕೊಳ್ಳುತ್ತಿದ್ದು, ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.

    

    ಮಾಹಿತಿ ಕಾರ್ಯಕ್ರಮದಲ್ಲಿ ಅರುಣ್ ಪಟವರ್ಧನ್ ಮತ್ತು ಪ್ರವೀಣ್, ಸೌರಶಕ್ತಿ ಮತ್ತು  ಜೀವನೋಪಾಯ ಸೌರ ಉಪಕರಣಗಳ ಬಗ್ಗೆ, ಸಾವಯವ ಕೃಷಿಕ ಗೋಪಾಲ ನಾಯಕ್ ಅವರು ಸಾವಯವ ಕೃಷಿ ಹಾಗೂ ಎರೆಹುಳು ಗೊಬ್ಬರ ತಯಾರಿಕೆ ಕುರಿತು ಉಪನ್ಯಾಸ ನೀಡಿದರುಪ್ರಕಾಶ್ ನಾಯಕ್ ಅವರು ಯೋಗದ ಮಹತ್ವ ಹಾಗೂ ಅದರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ಪ್ರಾತ್ಯಕ್ಷಿಕೆಯೊಂದಿಗೆ ಮಾಹಿತಿ ನೀಡಿದರು.


    ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಮೇಲ್ವಿಚಾರಕರು, ಸಖಿ ಒನ್ ಸ್ಟಾಪ್ ಕೇಂದ್ರದ ಸಿಬ್ಬಂದಿಗಳು, ಸಾಂತ್ವನ ಕೇಂದ್ರದ ಸಿಬ್ಬಂದಿಗಳು, ಬಾಲಭವನದ ಸಿಬ್ಬಂದಿಗಳು ಮತ್ತು ಯೋಜನಾ ಸಿಬ್ಬಂದಿಗಳು ಭಾಗವಹಿಸಿದರು.


     ಭಾರತೀಯ ವಿಕಾಸ ಟ್ರಸ್ಟ್ನ ಕಾರ್ಯಕ್ರಮ ಅಧಿಕಾರಿ ಪ್ರತಿಮಾ ಪ್ರಸ್ಥಾವನೆಗೈದರುಜಿಲ್ಲಾ ಮಹಿಳಾ ಸಬಲೀಕರಣ ಘಟಕದ ದೀಪಾ ಸ್ವಾಗತಿಸಿ, ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top