ಸಾಲಿಗ್ರಾಮ ಗಣೇಶ್ ಶೆಣೈಯವರಿಗೆ “ಇಂಟರ್ ನ್ಯಾಷನಲ್ ಸ್ಟಾರ್ ಆವಾರ್ಡ್” ಪ್ರಶಸ್ತಿ ಪ್ರಧಾನ

Upayuktha
0

 


ದಾವಣಗೆರೆ: ರಾಯಚೂರಿನ ಬೆಳಕು ಸಾಹಿತ್ಯ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ವತಿಯಿಂದ ಹುಬ್ಬಳ್ಳಿಯಲ್ಲಿ ಸವಾಯಿ ಗಂಧರ್ವ ಕಲಾ ಮಂದಿರದಲ್ಲಿ ಜುಲೈ 12 ರಂದು ನಡೆಯುವ ಬೆಳಕು ಸಮ್ಮೇಳನ ಸಮಾರಂಭದಲ್ಲಿ ದಾವಣಗೆರೆಯ ಸಾಲಿಗ್ರಾಮ ಗಣೇಶ್ ಶೆಣೈಯವರನ್ನು ಅವರ ಸಾಂಸ್ಕೃತಿಕ ಸಾಧನೆಯನ್ನು ಗುರುತಿಸಿ “ಇಂಟರ್ ನ್ಯಾಷನಲ್ ಸ್ಟಾರ್ ಆವಾರ್ಡ್” ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಬೆಳಕು ಸಂಸ್ಥೆಯ ಸಂಸ್ಥಾಪಕರಾದ ಅಣ್ಣಪ್ಪ ಮೇಟಿಗೌಡ  ತಿಳಿಸಿದ್ದಾರೆ.


ವಾಣಿಜ್ಯ ನಗರಿ ದಾವಣಗೆರೆಯನ್ನು ಕಳೆದ ನಾಲ್ಕು ದಶಕಗಳಿಂದ ನಿರಂತರವಾಗಿ ಕಠಿಣ ಪರಿಶ್ರಮದಿಂದ ಕಲೆ, ಸಾಹಿತ್ಯ, ಸಂಗೀತ, ಯಕ್ಷಗಾನ ಸೇರಿದಂತೆ ಸಾಂಸ್ಕೃತಿಕ ನಗರಿಯಾಗಿ ಪರಿವರ್ತಿಸಿದ ಶೆಣೈಯವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಬೆಳಕು ಸಂಸ್ಥೆಯ ಪದಾಧಿಕಾರಿಗಳು ಪ್ರಕಟಿಸಿದ್ದಾರೆ.


ದಾವಣಗೆರೆಯ ಕಲಾಕುಂಚ, ಕಾವ್ಯಕುಂಚ, ಯಕ್ಷರಂಗ, ಕಲಾಕುಂಚ ಮಹಿಳಾ ವಿಭಾಗ, ಸಿನಿಮಾಸಿರಿ, ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ, ಬಿಚ್ಕತ್ತಿ ಕುಟುಂಬ, ಕಲಾಸಿರಿ ಸಂಸ್ಥೆ, ಕರ್ನಾಟಕ ಸುಗಮ ಸಂಗೀತ ಪರಿಷತ್, ಕನ್ನಡ ಸಾಹಿತ್ಯ ಪರಿಷತ್, ಕರಾವಳಿ ಮಿತ್ರ ಮಂಡಳಿ, ಶ್ರೀ ಗಾಯಿತ್ರಿ ಪರಿವಾರ, ಕಲಾಕುಂಚದ ವಿವಿಧ ಶಾಖೆಗಳು, ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಮುಂತಾದ ಸಂಸ್ಥೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿಮಾನದಿಂದ ಅಭಿನಂದಿಸಿ ಕಲಾಕುಂಚದ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ಶುಭ ಹಾರೈಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top