ಮಂಗಳೂರು: ಕೆನರಾ ನಂದಗೋಕುಲದಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಅಕ್ಷತಾ ಸ್ವಾಗತಿಸಿ ಅಂತರರಾಷ್ಟ್ರೀಯ ಯೋಗ ದಿನದ ಮಹತ್ವವನ್ನು ತಿಳಿಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಉಜ್ವಲ್ ಮಲ್ಯರವರು ಉಪಸ್ಥಿತರಿದ್ದು, ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಕಾರ್ಯಕ್ರಮಕ್ಕೆ ಉತ್ತೇಜನ ನೀಡಿದರು.
ಯೋಗ ತರಬೇತುದಾರರಾದ ಶ್ರುತಿ ಮಾರ್ಗದರ್ಶನದಲ್ಲಿ ವಾರ್ಮ್-ಅಪ್ ವ್ಯಾಯಾಮಗಳು ಹಾಗೂ ವಿವಿಧ ಯೋಗಾಸನಗಳ ಪ್ರದರ್ಶನ ನಡೆಯಿತು. ಶ್ರೀಮತಿ ವಿದ್ಯಾ ಅವರು ಯೋಗದ ಮಹತ್ವದ ಕುರಿತು ಸಂಕ್ಷಿಪ್ತವಾಗಿ ಮಾತನಾಡಿ, “समत्वं योग उच्यते” ಎಂಬ ಭಗವದ್ಗೀತೆಯ ಸಂದೇಶವನ್ನು ಉಲ್ಲೇಖಿಸಿ, ಸುಖ-ದುಃಖ, ಜಯ-ಅಪಜಯಗಳಲ್ಲಿ ಮನಸ್ಸಿನ ಸಮತೋಲನವನ್ನು ಕಾಯ್ದುಕೊಳ್ಳುವುದೇ ಯೋಗವೆಂದು ತಿಳಿಸಿದರು. ಜೀವನದ ಎಲ್ಲ ಸಂದರ್ಭಗಳಲ್ಲಿಯೂ ಶಾಂತಚಿತ್ತದಿಂದ ಹಾಗೂ ಸಮಭಾವದಿಂದ ವರ್ತಿಸುವ ಗುಣವೇ ನಿಜವಾದ ಯೋಗವಾಗಿದೆ ಎಂದು ಅವರು ಹೇಳಿದರು. ಗಾಯತ್ರಿ ಅವರು ವಂದಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


