ಎಸ್.ಎಸ್.ಎಲ್.ಸಿ. ಪ್ರತಿಭಾನ್ವಿತರಿಗೆ ಕಲಾಕುಂಚದಿಂದ ಪ್ರತಿಭಾ ಪುರಸ್ಕಾರಕ್ಕೆ ಆಹ್ವಾನ

Upayuktha
0


ದಾವಣಗೆರೆ: ಇಲ್ಲಿನ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಕಳೆದ 36 ವರ್ಷಗಳಿಂದ 39 ಸಾವಿರ ಪ್ರತಿಭಾವಂತ ಮಕ್ಕಳಿಗೆ ಸನ್ಮಾನ ಮಾಡಲಾಗಿದೆ. ಪ್ರತೀ ವರ್ಷದಂತೆ ಈ ವರ್ಷವೂ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬಂದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಕಲಾಕುಂಚ ಅಧ್ಯಕ್ಷರಾದ ವಾಸುದೇವ ಲಕ್ಷ್ಮಣ್ ರಾಯ್ಕರ್ ತಿಳಿಸಿದ್ದಾರೆ. 


ಪ್ರಥಮ ಭಾಷೆ ಕನ್ನಡದಲ್ಲಿ 125ಕ್ಕೆ 125 ಪರಿಪೂರ್ಣ ಅಂಕಪಡೆದರೆ ಕಲಾಕುಂಚದಿಂದ “ಕನ್ನಡ ಕೌಸ್ತುಭ” ರಾಜ್ಯ ಪ್ರಶಸ್ತಿ, 625ಕ್ಕೆ 600ಕ್ಕೂ ಹೆಚ್ಚು ಅಂಕ ಪಡೆದ ಮಕ್ಕಳಿಗೆ ರಾಜ್ಯ ಮಟ್ಟದಲ್ಲಿ “ಸರಸ್ವತಿ ಪುರಸ್ಕಾರ” ರಾಜ್ಯ ಪ್ರಶಸ್ತಿ, ಪ್ರಥಮ ಭಾಷೆ ಕನ್ನಡದಲ್ಲಿ 125 ಕ್ಕೆ 120ರಿಂದ 124ರವರೆಗೆ ಅಂಕ ಪಡೆದ ಮಕ್ಕಳಿಗೆ ``ಕನ್ನಡ-ಕುವರ-ಕುವರಿ‘’  ಪ್ರಶಸ್ತಿ ವಿತರಿಸಲಾಗುವುದು ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ಪ್ರಕಟಿಸಿದ್ದಾರೆ.


ಈ ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ಸಮಾರಂಭದ ದಿನ  ಅಭಿನಂದನಾ ಪತ್ರ, ಕನ್ನಡ ತಾಯಿ ಭುವನೇಶ್ವರಿಯ ಶೃಂಗೇರಿಯ ಶ್ರೀ ಶಾರದಾ ಮಾತೆಯ ಸ್ಮರಣಿಕೆ ನೀಡಿ ಗೌರವಿಸಲಾಗುತ್ತದೆ. ಹೆಸರು ನೊಂದಾಯಿಸುವ ಕೊನೆಯ ದಿನಾಂಕ 30-6-2026 ಹೆಚ್ಚಿನ ಮಾಹಿತಿಗೆ 9538732777, 9945785170 ಈ ಸನೀಹವಾಣಿಗಳಿಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ಉಮೇಶ್ ವಿನಂತಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top