ಜು.1ರಂದು ದ.ಕ. ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ

Upayuktha
0

 


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ದ.ಕ.ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಜು.1ರಂದು ಬೆಳಗ್ಗೆ 11ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.  ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಪುಷ್ಪರಾಜ್ ಬಿ.ಎನ್, ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ವಿ. ಕರಿಕಾಲನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.


ನ್ಯೂಸ್ 18 ಕನ್ನಡ ವಾಹಿನಿಯ ಪ್ರಧಾನ ಸಂಪಾದಕ ಹರಿಪ್ರಸಾದ್ ಅಡ್ಪಂ ಗಾಯ ಉಪನ್ಯಾಸ ನೀಡಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಹಿರಿಯ ಪತ್ರಿಕಾ ವಿತರಕರಿಗೆ ಸನ್ಮಾನ ಹಾಗೂ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ. ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು ಉಪಸ್ಥಿತರಿರುವರು ಎಂದು ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top